ಕನಕಮಜಲು : ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ

0

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆ ಅಂಗವಾಗಿ ಸ್ವಚ್ಛತೆಯೇ ಸೇವೆ ಕಾರ್ಯಕ್ರಮದ ಪ್ರಯುಕ್ತ ಸ್ವಚ್ಛತಾ ಕಾರ್ಯವು
ಕನಕಮಜಲಿನಲ್ಲಿ ಅ.2ರಂದು ನಡೆಯಿತು.

ಕನಕಮಜಲು ಗ್ರಾ.ಪಂ. ವಠಾರದಲ್ಲಿ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬಳಿಕ ಕನಕಮಜಲು ಪೇಟೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.