ಕರಂಬಿಲ ಶಾಲೆಯಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ:

0

ಸ.ಕಿ.ಪ್ರಾ.ಶಾಲೆ ಕರಂಬಿಲದಲ್ಲಿ ಅ.2 ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನವನ್ನು ಆಚರಿಸಲಾಯಿತು. ಇಬ್ಬರೂ ರಾಷ್ಟ್ರ ನಾಯಕರ ಭಾವಚಿತ್ರಗಳಿಗೆ ಪುಷ್ಪಾರ್ಚಣೆ ಮಾಡುವ ಮೂಲಕ ಎಸ್.ಡಿ.ಎಂ.ಸಿ ಅಧ್ಯಕ್ಷ ರಾದ ವಸಂತರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಈ ದಿನದ ಮಹತ್ವದ ಬಗ್ಗೆ ತಿಳಿಸಿದರು.ಮುಖ್ಯಶಿಕ್ಷಕಿ ಭವ್ಯರವರು ಮಹಾನ್ ನಾಯಕರ ಬಗ್ಗೆ ಪ್ರಾಸ್ತಾವಿಕ ಗೈದರು ಯ.ವಿದ್ಯಾರ್ಥಿಗಳು ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕವೃಂದ , ಎಸ್.ಡಿ.ಎಂ.ಸಿ ಯ ಸದಸ್ಯರು, ಹಿರಿಯ ವಿದ್ಯಾರ್ಥಿಗಳು ಹಾಗೂ ಶಾಲಾ ಮಕ್ಕಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಅತಿಥಿ ಶಿಕ್ಷಕಿ ಗಾಯತ್ರಿ ನಿರೂಪಿಸಿದರು. ಶಾಲಾ ಆವರಣದಲ್ಲಿ ಸ್ವಚ್ಚತಾ ಕಾರ್ಯವನ್ನು ಮಾಡಲಾಯಿತು.