ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ಗಾಂಧಿ ಜಯಂತಿ ಆಚರಣೆ

0

ಸುಳ್ಯದ ಆಯುರ್ವೇದ ಕಾಲೇಜು ಮುಂಭಾಗವಿರುವ ಅಡ್ಕಾರ್ ಆರ್ಕೆಡ್‌ನಲ್ಲಿ ಕಾರ್ಯಚರಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ಅ.2 ರಂದು ಗಾಂಧಿ ಜಯಂತಿ ಹಬ್ಬವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹಿಂದೂ ಧರ್ಮದ ಭಗವದ್ಗೀತಾ, ಇಸ್ಲಾಂ ಧರ್ಮದ ಕುರಾನ್ ಹಾಗೂ ಕ್ರೈಸ್ತ ಧರ್ಮದ ಬೈಬಲ್ ಕುರಿತು ಮಕ್ಕಳಿಗೆ ತಿಳಿಸಲಾಯಿತು.

ರಘುಪತಿ ರಾಘವ ಗೀತೆಯನ್ನು ಹಾಡಲಾಯಿತು.
ಶಾಲಾ ವಿದ್ಯಾರ್ಥಿಗಳಾದ ಶಿವಂಶ್ ಗಾಂಧಿ ವೇಷಧರಿಸಿದರೆ , ಹೃದಾನ್ ಶಾಸ್ತ್ರಿ ವೇಷ ಧರಿಸಿ ಆಗಮಿಸಿದ ಎಲ್ಲರನ್ನು ಖುಷಿಪಡಿಸಿದರು.

ಶಾಲಾ ಸಂಚಾಲಕಿ ಗೀತಾಂಜಲಿ ಟಿ.ಜಿ. , ಶಿಕ್ಷಕರು, ಪೋಷಕ ವೃಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಂಸ್ಥೆ ಯ ವತಿಯಿಂದ ನವರಾತ್ರಿ ಪ್ರಯುಕ್ತ ಪೋಷಕರಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.