ನಿಂತಿಕಲ್ಲು ಕೆ.ಎಸ್. ಗೌಡ ಪಿ.ಯು. ಕಾಲೇಜು ಆಶ್ರಯದಲ್ಲಿ ತಾ.ಮಟ್ಟದ ಪಿ.ಯು.ಸಿ ಬಾಲಕ ಬಾಲಕಿಯರ ಕ್ರೀಡಾಕೂಟ

0

ರಾಜಕೀಯ ಪ್ರವೇಶದಿಂದ ಕ್ರೀಡಾಕ್ಷೇತ್ರ ಕೆಟ್ಟು ಹೋಗಿದೆ – ತುಕಾರಾಂ ಯೇನೆಕಲ್ಲು

ಕ್ರೀಡಾ ಕ್ಷೇತ್ರಕ್ಕೆ ರಾಜಕಾರಣಿಗಳ ಹಸ್ತಕ್ಷೇಪವಾದರೆ ಆ ಕ್ಷೇತ್ರ ಮತ್ತೆ ಅಭಿವೃದ್ಧಿಯಾಗುವುದಿಲ್ಲ.
ಯಾವುದೇ ದೇಶದಲ್ಲಿ ರಾಜಕೀಯ ವ್ಯಕ್ತಿಗಳು ಕ್ರೀಡಾ ರಂಗಕ್ಕೆ ಪ್ರವೇಶ ಮಾಡುವುದಿಲ್ಲ. ನಮ್ಮ ದೇಶದಲ್ಲಿ ರಾಜಕೀಯ ಪ್ರವೇಶದಿಂದ ಕ್ರೀಡಾಕ್ಷೇತ್ರ ಕೆಟ್ಟು ಹೋಗಿದೆ.

ಯಾವುದೇ ಕ್ರೀಡಾಪಟು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಸೆಲೆಕ್ಷನ್ ಆಗಬೇಕಾದರೆ ಲಂಚ ನೀಡಬೇಕು. ಇದರಿಂದ ನಿಜವಾದ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ ಎಂದು ತುಕಾರಾಂ ಯೇನೆಕಲ್ಲು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಅಮ 5ರಂದು ಕೆ.ಎಸ್‌. ಗೌಡ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಎಣ್ಮೂರಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್. ಗೌಡ ಸಮೂಹ ವಿದ್ಯಾ ಸಂಸ್ಥೆಗಳ ಕಾರ್ಯಾಧ್ಯಕ್ಷರಾದ ಅಶೋಕ್ ಕುಮಾರ್ ಕೆ.ಎಸ್. ವಹಿಸಿದ್ದರು.

ಸುದ್ದಿ ಬಿಡುಗಡೆ ವಾರಪತ್ರಿಕೆಯ ವರದಿಗಾರ ಈಶ್ವರ ವಾರಣಾಶಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಯೋಗೀಶ್ ಚಿದ್ಗಲ್ ರವರಿಗೆ ಗೌರವಾರ್ಪಣೆ ಈ ಸಂದರ್ಭದಲ್ಲಿ ನಡೆಯಿತು.


ಸಂಘಟನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ರೈ ಪಾದೆಕಲ್ಲು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುದರ್ಶನ ಪಟ್ಟಾಜೆ, ಉಪಾಧ್ಯಕ್ಷೆ ಶ್ರೀಮತಿ ಯಮುನಾ ಕಾರ್ಜ, ಶಿಕ್ಷಕ ರಕ್ಷಕ ಸಂಘದ ಪೂರ್ವಾಧ್ಯಕ್ಷ ಕುಮಾರಸ್ವಾಮಿ ಕೆ.ಎಸ್, ಕೆ.ಎಸ್. ಗೌಡ ಪ್ರೌಢಶಾಲಾ ಮುಖ್ಯ ಶಿಕ್ಷಕ ಉಮೇಶ್, ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಹಿರಿಯ ತರಬೇತಿ ಅಧಿಕಾರಿ ದಯಾನಂದ ಕೆಬ್ಬೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಉಜ್ವಲ್ ಸನ್ಮಾನ ಪತ್ರ ವಾಚಿಸಿದರು. ಸಂಸ್ಥೆಯ ಕಾರ್ಯಕ್ರಮಾಧಿಕಾರಿ ಪ್ರಸನ್ನ ವೈಟಿ ಸ್ವಾಗತಿಸಿ, ಕೆ.ಎಸ್. ಗೌಡ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕುವೆಂಜ ವಂದಿಸಿದರು. ಉಪನ್ಯಾಸಕ ಜೀವನ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.