ಆನೆಗುಂಡಿಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ತೆರವು

0

ವಾಹನ ಸಂಚಾರ ಆರಂಭ

ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯಾಚರಣೆ – ರಾತ್ರಿ 8 ಗಂಟೆ ಬಳಿಕ ಸುಳ್ಯಕ್ಕೆ ವಿದ್ಯುತ್ ಸರಬರಾಜು

ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಬೃಹತ್ ಮರವನ್ನು ತೆರವುಗೊಳಿಸಲಾಗಿದ್ದು, ವಾಹನ ಸಂಚಾರ ಆರಂಭಗೊಂಡಿದೆ. ಮೆಸ್ಕಾಂ ಇಲಾಖೆಯವರು ವಿದ್ಯುತ್ ದುರಸ್ತಿ ಕಾರ್ಯಾಚರಣೆ ನಡೆಸುತ್ತಿದ್ದು, ರಾತ್ರಿ 8 ಗಂಟೆಯ ಬಳಿಕ ಸುಳ್ಯಕ್ಕೆ ವಿದ್ಯುತ್ ಸರಬರಾಜಾಗಲಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ಸುಳ್ಯ ಪೊಲೀಸರ ಉಪಸ್ಥಿತಿಯಲ್ಲಿ ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ ಹಾಗೂ
ಸ್ಥಳೀಯರು ಸೇರಿ ರಸ್ತೆಯಿಂದ ಮರವನ್ನು ತೆರವು ಕಾರ್ಯ ನಡೆಸಿರುವುದಾಗಿ ತಿಳಿದುಬಂದಿದೆ.

ಎರಡು ದೊಡ್ಡ ವಿದ್ಯುತ್ ಕಂಬಗಳು ಮುರಿದಿದ್ದು, ಮೆಸ್ಕಾಂ ಇಲಾಖೆ ಸಿಬ್ಬಂದಿಗಳು ದುರಸ್ತಿ ಕಾರ್ಯಾಚರಣೆ ನಡೆಸುತ್ತಿದ್ದು, ರಾತ್ರಿ 8 ಗಂಟೆಯ ಬಳಿಕ ವಿದ್ಯುತ್ ಸರಬರಾಜು ಆಗಲಿದೆ ಎಂದು ಮೆಸ್ಕಾಂ ಇಲಾಖೆಯವರು ಸುದ್ದಿಗೆ ತಿಳಿಸಿದ್ದಾರೆ.