ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಯಲ್ಲಿ ಅಕ್ಷಯ ಬಾಬ್ಲುಬೆಟ್ಟು ಗೆ ಚಿನ್ನದ ಪದಕ

0

ಕರ್ನಾಟಕ ಸರಕಾರ ಯೋಗ ದಸರಾ ಉಪ ಸಮಿತಿ – 2024 ನಡೆಸಿದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ – 2024 ರಲ್ಲಿ 08 ರಿಂದ 10 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ
ಅಕ್ಷಯ ಬಾಬ್ಲುಬೆಟ್ಟು ಪ್ರಥಮ ಸ್ಥಾನಗಳಿಸಿರುತ್ತಾರೆ.

ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏನೇಕಲ್ಲು ನಲ್ಲಿ 04 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.


ಇವರು ಏನೇಕಲ್ಲು (ಬಾಬ್ಲುಬೆಟ್ಟು) ನಿವಾಸಿ ಮೋಹನ್ ಕುಮಾರ್ ಮತ್ತು ಶ್ರೀಮತಿ ದಿವ್ಯ ಕುಮಾರಿ ರವರ ಪುತ್ರಿ. ನಿರಂತರ ಯೋಗ ಕೇಂದ್ರ ಏನೇಕಲ್ಲು ಇಲ್ಲಿಯ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.