ವಿದ್ಯಾ ಎಸ್. ಗೆ ಡಾಕ್ಟರೇಟ್

0

ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿಯಾಗಿ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿರುವ ವಿದ್ಯಾ ಎಸ್ ಗೆ ಡಾಕ್ಟರೇಟ್ ಪದವಿ ಲಭಿಸಿದೆ.

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಕಲಾ ವಿಭಾಗದ ಡೀನ್ ಮತ್ತು ಸಮಾಜಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಮುಖ್ಯಸ್ಥರೂ, ಹಿರಿಯ ಪ್ರಾಧ್ಯಾಪಕರೂ ಆದ ಪ್ರೊಫೆಸರ್ ಡಾ. ಗುರುಲಿಂಗಯ್ಯ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ.

ಸುಮಾರು ಹದಿನಾಲ್ಕು ವರ್ಷಗಳಿಂದ ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ದಲ್ಲಿ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿಯಾಗಿ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತಿರುವ ಇವರು ಮಂಗಳೂರು ನಿವಾಸಿಯಾಗಿದ್ದು ಸುಳ್ಯ ತಾಲ್ಲೂಕಿನ ಬಾಳುಗೋಡು ಗ್ರಾಮದ ಮಾನಡ್ಕದ ಶೇಡಿಗುಮ್ಮೆ ಪುರುಷೋತ್ತಮ ಭಟ್ ಹಾಗೂ ಇಂದಿರಾ ದಂಪತಿಗಳ ಪುತ್ರಿ.