ವಿಧಾನ ಪರಿಷತ್ ಚುನಾವಣೆ : ಅ.11 ರಂದು ಸುಳ್ಯದಲ್ಲಿ ಕಾಂಗ್ರೆಸ್ ಸಭೆ

0

ಸಚಿವ ದಿನೇಶ್ ಗುಂಡೂರಾವ್ ಸಹಿತ ಹಲವರು‌ ಭಾಗಿ

ವಿಧಾನ ಪರಿಷತ್ ಚುನಾವಣೆಯ ತಯಾರಿಯ ಕುರಿತು ಕಾಂಗ್ರೆಸ್ ವತಿಯಿಂದ ಪೂರ್ವಭಾವಿ ಸಭೆಯು ಅ.11 ರಂದು ಪೂ.ಗಂಟೆ 10.00ಕ್ಕೆ ಸುಳ್ಯದ ಸದರ್ನ್ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಅದ್ಯಕ್ಷತೆಯಲ್ಲಿ ನಡೆಯಲಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹಾಗೂ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈಯವರ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ನೇತೃತ್ವದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಜಿ. ಎ. ಬಾವ ಮತ್ತು ಕೆಪಿಪಿಸಿ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಚುನಾಯಿತ ಜನಪ್ರತಿನಿದಿಗಳು, ಪಟ್ಟಣ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ವಲಯ ಕಾಂಗ್ರೆಸ್ ಪದಾಧಿಕಾರಿಗಳು, ಗ್ರಾಮ ಸಮಿತಿ ಅಧ್ಯಕ್ಷರು, ಬೂತ್ ಸಮಿತಿ ಅಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸುವಂತೆ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.