ಸೋನ ಅಡ್ಕಾರು ಯೋಗಾಸನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಇಲಾಖೆಯವರು ನಡೆಸಿದ 14ರ ವಯೋಮಿತಿಯೊಳಗಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಸೋನಾ ಅಡ್ಕಾರು ಅವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ, ಮೂಡಬಿದಿರೆಯಲ್ಲಿ ಜರುಗಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, , ಮೈಸೂರಿನಲ್ಲಿ ನಡೆದ 8 ಜಿಲ್ಲಾ ವಲಯ ಮಟ್ಟದ ಅಯ್ಕೆಯಾಗಿದ್ದಾರೆ.

ಅ.10ರಂದು ಚಿತ್ರದುರ್ಗದ ಸಿರಿಗೆರೆಯಲ್ಲಿ ಜರುಗಿದ 32 ಜಿಲ್ಲೆಯ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ, ಆಯ್ಕೆಯಾಗಿದ್ದು, ನವೆಂಬರ್‌ ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಈಕೆ ಜಾಲ್ಸೂರು ಗ್ರಾಮದ ಅಡ್ಕಾರಿನ ಶರತ್ ಅಡ್ಕಾರು ಹಾಗೂ ಶ್ರೀಮತಿ ಶೋಭಾ ಶರತ್ ದಂಪತಿಯ ಪುತ್ರಿಯಾಗಿದ್ದು, ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ. ಈಕೆಗೆ ಯೋಗ ಗುರುಗಳಾದ ಸಂತೋಷ್ ಮುಂಡಕಜೆ ಹಾಗೂ ಶ್ರೀಮತಿ ಪ್ರಸ್ವಿಜ ಸಂತೋಷ್ ಅವರು ಯೋಗ ತರಬೇತಿ ನೀಡಿದ್ದಾರೆ.