ಪಂಜ : ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜೆ ಸಂಪನ್ನ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜೆ ಅ3 ರಂದ ಆರಂಭ ಗೊಂಡು ಅ.12 ರಂದು ಸಂಪನ್ನ ಗೊಂಡಿತು. ಪ್ರತಿ ದಿನ ಶ್ರೀ ದೇವರಿಗೆ ಮಹಾ ಪೂಜೆ, ಪ್ರಸಾದ ವಿತರಣೆ , ಅನ್ನ ಸಂತರ್ಪಣೆ.
ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ, ಮತ್ತು ಅಷ್ಟಾವಾದನ ಕಾರ್ಯಕ್ರಮ ನಡೆಯಿತು.

‌ಅ. 12 ರಂದು ಯುವ ಸ್ಫೂರ್ತಿ ಕಲ್ಮಡ್ಕ ಇವರಿಂದ ಭಜನಾ ಸಂಕೀರ್ತನೆ.ಶ್ರೀಮತಿ ಚೈತ್ರಿಕ ಕೋಡಿಬೈಲು ರವರಿಂದ ಸಂಗೀತ ಸೇವೆ ಜರುಗಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನಾ ಸಮಿತಿ ಸದಸ್ಯರು, ಗೌರವ ಸಲಹೆಗಾರರು,ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.