ಕೊಡಗು ಸಂಪಾಜೆ : ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

0

ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿ ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕೊಡಗು ಸಂಪಾಜೆ ಶಾಲೆಯ ಬಳಿ ಅ. 14 ಮುಂಜಾನೆ 4 ಗಂಟೆಗೆ ನಡೆದಿದೆ.

ಕಾಸರಗೋಡಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದು ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಮತ್ ಅವರ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ. ಕಾರಿನಲ್ಲಿ ಮಗು ಸಮೇತ ಮೂವರು ಇದ್ದಾರೆನ್ನಲಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಕೊಡಗು ಸಂಪಾಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸ್ಥಳೀಯರು ಮತ್ತು ಪೊಲೀಸ್ ಠಾಣಾ ಸಿಬ್ಬಂದಿ ವರ್ಗ ಭೇಟಿ ನೀಡಿದ್ದಾರೆ.