ಯುವಜನತೆ ತಮ್ಮ ಮೇಲಿರುವ ಅಪವಾದದಿಂದ ಮುಕ್ತವಾಗಬೇಕು :ಅಡ್ತಲೆ ಎನ್ನೆಸ್ಸೆಸ್ ಶಿಬಿರದಲ್ಲಿ ಡಾ. ಅನುರಾಧಾ ಕುರುಂಜಿ

0

ಇಂದು ಸಮಾಜದಲ್ಲಿಯಾವುದೇ ಅನಾಹುತಗಳು ನಡೆದರೂ ಯುವ ಜನತೆಯನ್ನೇ ಬೊಟ್ಟು ಮಾಡಿ ತೋರಿಸಲಾಗುತ್ತಿದೆ. ಆದ್ದರಿಂದ ಯುವ ಜನತೆ ಅಂತಹ ಅಪವಾದದಿಂದ ಮುಕ್ತರಾಗಬೇಕು ಎಂದು ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ ನಡೆಯುತ್ತಿರುವ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ “ಯುವ ಜನತೆ- ಪ್ರಸ್ತುತ ಮನಸ್ಥಿತಿ ಮತ್ತು ಪರಿಹಾರ” ಎಂಬ ವಿಷಯದಲ್ಲಿ ಮಾತನಾಡುತ್ತಿದ್ದರು.
ಇಂದು ದಿನ ಬೆಳಗಾದರೆ ವೃತ್ತ ಪತ್ರಿಕೆಗಳಲ್ಲಿ ,ಮಾಧ್ಯಮಗಳಲ್ಲಿ ಬರುತ್ತಿರುವ ಅನೇಕ ಅಪರಾಧ ಸುದ್ದಿಗಳಲ್ಲಿ ಯುವಜನರದ್ದೇ ಬಹುಪಾಲು. ಆದ್ದರಿಂದ
ಇಡೀ ಯುವಜನತೆಯೇ ಇವೆಲ್ಲಾ ಅನಾಹುತಗಳಿಗೆ ಕಾರಣವೆಂದು ಬಿಂಬಿಸಲಾಗುತ್ತಿದೆ. ಅದಕ್ಕೆ ಕಾರಣ ಇಂದಿನ ಯುವ ಜನರ ಮನಸ್ಥಿತಿಯಾಗಿದ್ದು ಆ ನಿಟ್ಟಿನಲ್ಲಿ ಇಂತಹ ಅಪವಾದಗಳಿಂದ ಯುವ ಜನರು ಮುಕ್ತರಾಗಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ವಿ.ಜಿ ಪಾಲಿಟೆಕ್ನಿಕ್ ನ ಸಿವಿಲ್ ವಿಭಾಗದ ಮುಖ್ಯಸ್ಥ ಹರೀಶ್ ಕುಮಾರ್ ವಹಿಸಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಕೆವಿಜಿ ಪಾಲಿಟೆಕ್ನಿಕ್ ನ ಸಿವಿಲ್ ವಿಭಾಗದ ಮುಖ್ಯಸ್ಥ ಹರೀಶ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅರಂತೋಡು ಇಲ್ಲಿಯ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ, ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಮೋಹನ್ ಅಡ್ತಲೆ,
ಶಿಬಿರಾಧಿಕಾರಿಗಳಾದ ಚಂದ್ರಶೇಖರ ಬಿಳಿನೆಲೆ ಮತ್ತು ಸುನಿಲ್ ಕುಮಾರ್ ಉಪಸ್ಥಿತರಿದ್ದರು.
ಸ್ವಯಂ ಸೇವಕಿ ಅಕ್ಷತಾರವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ದಯಾನಂದ ಕೆ.ವಿ. ಸ್ವಾಗತಿಸಿ ಲಿಖಿತ್ ಕೆ.ಬಿ ವಂದಿಸಿದರು. ಅಪೂರ್ವ ಕಾರ್ಯಕ್ರಮ ನಿರೂಪಿಸಿದರು.