ಪಂಜದ ಮರಿಯ ಮಹಲ್ ನಲ್ಲಿ ಬಾಡಿಗೆ ರೂಮ್ ನಲ್ಲಿ ವಾಸವಾಗಿದ್ದ ಬೆಂಗಳೂರಿನ ಕೇಶವ ತಿವಾರಿ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅ.18 ರಂದು ಮುಂಜಾನೆ ಬೆಳಕಿಗೆ ಬಂದಿದೆ.









ಸ್ಥಳಕ್ಕೆ ಸುಬ್ರಹ್ಮಣ್ಯ ಪೋಲೀಸ್ ರು ಆಗಮಿಸಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅವರು ಕೆಲವು ಸಮಯಗಳಿಂದ ಬಾಡಿಗೆ ರೂಮ್ ನಲ್ಲಿದ್ದು ಆನ್ ಲೈನ್ ಉದ್ಯೋಗ ನಡೆಸುತ್ತಿದ್ದರು ಎನ್ನಲಾಗಿದೆ.










