ಐವರ್ನಾಡು ಸಹಕಾರಿ ಸಂಘದ ಸಿಬ್ಬಂದಿ ಭೋಜಪ್ಪ ಗೌಡರಿಗೆ ಸಾರ್ವಜನಿಕ ಶ್ರದ್ಧಾಂಜಲಿ

0

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ರಸ್ತೆ ಅಪಘಾತದಲ್ಲಿ ಅಕಾಲಿಕವಾಗಿ ನಿಧನರಾಗಿದ್ದು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಅ.21 ರಂದು ಸಂಘದ ಸಭಾಭವನದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಎಸ್.ಎನ್.
ಮನ್ಮಥರವರು ದಿ.ಭೋಜಪ್ಪ ಗೌಡರವರ ಬಗ್ಗೆ ಗುಣಗಾನಗೈದು ನುಡಿನಮನ ಸಲ್ಲಿಸಿದರು.


ಬಳಿಕ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ,ಸಂಘದ ನಿರ್ದೇಶಕರು,ಸಿಬ್ಬಂದಿ ವರ್ಗದವರು,
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ,ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ,ಸದಸ್ಯರು,ಸಿಬ್ಬಂದಿ ವರ್ಗದವರು,ಸಹಕಾರಿ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಪುಷ್ಪಾರ್ಚನೆ ಮಾಡಿದರು.