ಸುಳ್ಯದಲ್ಲಿ ವಲಯ ಮಟ್ಟದ ಕ್ರೀಡಾಕೂಟ – 2024

0

ಅದ್ದೂರಿಯಾಗಿ ನಡೆದ ಉದ್ಘಾಟನಾ ಸಮಾರಂಭ

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜಟ್ಟಿಪಳ್ಳ ಸ ಹಿ ಪ್ರಾ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ನಡೆಯುವ ಎರಡು ದಿನಗಳ ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 2024 ಇದರ ಉದ್ಘಾಟನಾ ಸಮಾರಂಭ ಸುಳ್ಯ ಸ.ಪ.ಪೂ ಕಾಲೇಜು ಮೈದಾನದಲ್ಲಿ ಅ. 22 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಮಾ. ಹಿ ಪ್ರಾ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರವಿರಾಜ್ ಅಡ್ಕಾರ್ ವಹಿಸಿದ್ದರು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬೊಳಿಯ ಮಜಲು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ್ ನೆರವೇರಿಸಿದರು.

ಧ್ವಜಾರೋಹಣವನ್ನು ಸುಳ್ಯ ಸ.ಪ.ಪೂ. ಕಾಲೇಜು ಪ್ರಾಂಶುಪಾಲ ಮೋಹನ್ ಗೌಡ ನೆರವೇರಿಸಿದರು.

ವೇದಿಕೆಯಲ್ಲಿ ಸ ಪ ಪೂ ಕಾಲೇಜು ಉಪಪ್ರಾಂಶುಪಾಲ ಪ್ರಕಾಶ್ ಮೂಡಿತಾಯ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತಾ, ಸ.ಮಾ.ಹಿ.ಪ್ರಾ.ಶಾಲಾ ಹಳೆ ವಿದ್ಯಾರ್ಥಿ ಸಂಘದ ಸಂಚಾಲಕ ಅರ್ ಕೆ ಭಟ್,ಸುಳ್ಯ ಮಾದರಿ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ ಬಿ ಸದಾಶಿವ,ಉಪಾಧ್ಯಕ್ಷ ಅಶೋಕ ಪ್ರಭು, ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕಿ ಶ್ರೀಮತಿ ಕಮಲಾಕ್ಷಿ, ನಿವೃತ ಶಿಕ್ಷಕ ಜೆ ಕೆ ನಾವ್ಡ, ಡಾ. ರಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲಾ ವಿಭಾಗದ 29 ಶಾಲೆಗಳ ಸುಮಾರು ಐನೂರಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಶಿಕ್ಷಕಿ ಶ್ರೀಮತಿ ಕೇಸರಿ ಶಿಕ್ಷಕಿ ಸುನಂದ ವಂದಿಸಿದರು. ಶಿಕ್ಷಕ ಚಂದ್ರಶೇಖರ್ ಪಿ ಕಾರ್ಯಕ್ರಮ ನಿರೂಪಿಸಿದರು.
ಸುಮಾರು ನೂರಕ್ಕೂ ಹೆಚ್ಚು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದರು.

ಶಾಲೆಗಳ ಎಸ್ ಡಿ ಎಂ ಸಿ ಪದಾಧಿಕಾರಿಗಳು ಸದಸ್ಯರುಗಳು ಭಾಗವಹಿಸಿದ್ದರು.