ಸುಳ್ಯ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

0

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇದರ ಸಹಯೋಗದೊಂದಿಗೆ ಅ. 29ರಂದು ನಡೆಯಲಿರುವ 9ನೇ ವರ್ಷದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ಆಯುರ್ವೇದ ಸಪ್ತಾಹ ಕಾರ್ಯಕ್ರಮವನ್ನು ಅ. 21ರಿಂದ ಅ. 29 ರ ತನಕ ಹಮ್ಮಿಕೊಂಡಿದ್ದು, ಎರಡನೆಯ ದಿನವಾದ ಅ. 22ರಂದು ಕಾಲೇಜಿನ ಆಡಿಟೋರಿಯಂನಲ್ಲಿ – “ಪರಿಸರ ರಕ್ಷಣೆ ಹಾಗೂ ಸಸ್ಯ ಹಾಗೂ ಪ್ರಾಣಿಗಳ ಯೋಗಕ್ಷೇಮದಲ್ಲಿ ಆಯುರ್ವೇದ ಪಾತ್ರ” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಲಯನ್ಸ್ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ, ಇನ್ನರ್ ವೀಲ್ ಕ್ಲಬ್ ಸುಳ್ಯ, ಮಹಿಳಾ ಸಮಾಜ ಸುಳ್ಯ, ಮಹಿಳಾ ಒಕ್ಕೂಟ ಸುಳ್ಯ, ರೋಟರಿ ಸಿಟಿ ಸುಳ್ಯ ಹಾಗೂ ಕಾಲೇಜಿನ ಎನ್ ಎಸ್ ಎಸ್ ಘಟದ ಸಹಯೋಗದಿಂದ ನಡೆದ
ಮಾಹಿತಿ ಕಾರ್ಯಗಾರವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಅಗದ ತಂತ್ರ ವಿಭಾಗದ ಮುಖ್ಯಸ್ಥರಾದ ಡಾ. ಅವಿನಾಶ್ ಕೆ.ವಿ. ನಡೆಸಿಕೊಟ್ಟರು. ವೇದಿಕೆಯಲ್ಲಿ ಸುಳ್ಯ ಲಯನ್ಸ್ ಕ್ಲಬ್ ಸುಳ್ಯದ ಅಧ್ಯಕ್ಷ ಲ. ರಾಮಕೃಷ್ಣ ರೈ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷೆ ರೋ. ಯೋಗಿತಾ ಗೋಪಿನಾಥ್, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಚಿಂತನ ಸುಬ್ರಹ್ಮಣ್ಯ, ಮಹಿಳಾ ಸಮಾಜದ ಅಧ್ಯಕ್ಷೆ ಲ. ಪುಷ್ಪಾ ಮಾಣಿಬೆಟ್ಟು, ಮಹಿಳಾ ಸಮಾಜ ಸುಳ್ಯ ಇದರ ಅಧ್ಯಕ್ಷೆ ಹರಿಣಿ ಸದಾಶಿವ, ರೋಟರಿ ಸುಳ್ಯ ಸಿಟಿಯ ಅಧ್ಯಕ್ಷ ಶಿವಪ್ರಸಾದ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಕಾಲೇಜಿನ ಅಗದ ತಂತ್ರ ವಿಭಾಗದ ಮುಖ್ಯಸ್ಥರಾದ ಡಾ. ಅವಿನಾಶ್ ಕೆ.ವಿ. ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ವಿವಿಧ ಸಂಘಗಳ ಸದಸ್ಯರುಗಳು, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಯಾದ ಡಾ. ಹರ್ಷಿತಾ ಎಂ, ಎನ್ ಎಸ್ ಎಸ್ ಘಟದ ಮುಖ್ಯಸ್ಥರಾದ ಡಾ. ಪ್ರಮೋದಾ ಪಿ ಎ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಕಿರಿಯ ವೈದ್ಯರುಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ
ಡಾ ಲೀಲಾಧಾರ್ ಡಿ. ವಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು, ಮಹಿಳಾ ಸಮಾಜದ ಅಧ್ಯಕ್ಷರಾದ ಶ್ರೀಮತಿ ಹರಿಣಿ ಸದಾಶಿವರು ಆಯುರ್ವೇದದ ಉಪಯೋಗದಿಂದ ತಮ್ಮ ಜೀವನದಲ್ಲಿ ಲಭಿಸಿದ ಪ್ರಯೋಜನಗಳು ಹಾಗೂ ಪರಿಸರ ರಕ್ಷಣೆಯ ಮಹತ್ವವನ್ನು ತಿಳಿಸಿದರು.


ವಿದ್ಯಾರ್ಥಿಗಳಾದ ಚಿತ್ಕಲ ಭಾರಧ್ವಾಜ್ ಹಾಗೂ ಅಶ್ವಿನಿ ಪ್ರಾರ್ಥಿಸಿದರು.
ವಿದ್ಯಾರ್ಥಿಗಳಾದ ಕು. ಯಶಸ್ವಿನಿ ಹಾಗೂ ಕು. ಲಕ್ಷ್ಮಿ
ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.