ಅ. 25 – 26 : ಎಲಿಮಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ

0

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಮತ್ತು ಸರಕಾರಿ ಪ್ರೌಢಶಾಲೆ ಎಲಿಮಲೆ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ ಕ್ರೀಡಾ ವೈಭವ – 2024 ಎಲಿಮಲೆಯ ಸರಕಾರಿ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಅ.25 ಮತ್ತು 26 ರಂದು ನಡೆಯಲಿದೆ.

ಅ. 25 ರಂದು ಬೆಳಿಗ್ಗೆ ಕ್ರೀಡಾಪಟುಗಳ ಸಮಾವೇಶ, ಧ್ವಜಾರೋಹಣ, ಪಥಸಂಚಲನ ಗೌರವವಂದನೆ ನಡೆದು ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ.

ಅ.26ರಂದು ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ನಡೆಯಲಿದೆ.