ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಯೋಜನಾ ವ್ಯಾಪ್ತಿಯ ಸೇವಾಪ್ರತಿನಿಧಿಗಳ ಅರ್ಧವಾರ್ಷಿಕ ಪ್ರಗತಿ ಪರಿಶೀಲನಾ ಸಭೆಯನ್ನು ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ಅ,26 ರಂದು ನಡೆಯಿತು.
ಈ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲೆ 2 ರ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ದೀಪವನ್ನು ಪ್ರಜ್ವಲಿಸಿ ಉದ್ಘಾಟಿಸಿದರು.
ತಾಲೂಕಿನ ಯೋಜನಾಧಿಕಾರಿಯವರಾದ ಮಾಧವ ಗೌಡ, ಜಿಲ್ಲಾ ಎಂ ಐ ಸಿ ಯೋಜನಾಧಿಕಾರಿಯವರಾದ ಶ್ರೀಮತಿ ಶಕುಂತಲಾ ಮಾಹಿತಿ ನೀಡಿದರು.
ಈ ಸಭೆಯಲ್ಲಿ ತಾಲೂಕು ಕಛೇರಿ ಹಣಕಾಸು ಪ್ರಬಂಧಕರಾದ ಅತೀಶ್ ರವರು, ಎಲ್ಲಾ ಮೇಲ್ವಿಚಾರಕರ ಶ್ರೇಣಿಯ ಸಿಬ್ಬಂದಿಗಳು, ಎಲ್ಲಾ ಸೇವಾಪ್ರತಿನಿಧಿಯವರು ಭಾಗವಹಿಸಿದರು.
ಅಜ್ಜಾವರ ವಲಯದ ಮೇಲ್ವಿಚಾರಕರಾದ ಶ್ರೀಮತಿ ಕಾಂತಿಕಾಮಣಿರವರು ಸ್ವಾಗತಿಸಿದರು. ಅಜ್ಜಾವರ ವಲಯದ ಸೇವಾಪ್ರತಿನಿಧಿ ಶ್ರೀಮತಿ ಸುನೀತಾರವರು ಕಾರ್ಯಕ್ರಮ ನಿರೂಪಿಸಿದರು.