ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ಪರೀಕ್ಷೆಯನ್ನು ಅ. 27ರಂದು ನಡೆಸಲಾಯಿತು. ಒಟ್ಟು 1600ಕ್ಕೂ ಅಧಿಕ ವಿದ್ಯಾರ್ಥಿಗಳು ರಾಜ್ಯ, ಹೊರರಾಜ್ಯ, ಹೊರರಾಷ್ಟ್ರದಿಂದ ಆನ್ಲೈನ್ ಮೂಲಕ ಪರೀಕ್ಷೆ ಬರೆದರು.
ಸ್ಕಾಲರ್ಷಿಪ್ ಪರೀಕ್ಷೆಯಲ್ಲಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತಲಾ 5ವಿದ್ಯಾರ್ಥಿಗಳಂತೆ ಒಟ್ಟು 10 ವಿದ್ಯಾರ್ಥಿಗಳಿಗೆ ಭೋದನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ. ಕಾರ್ಯಕ್ರಮಕ್ಕೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್, ಮೌರ್ಯ ಆರ್ ಕುರುಂಜಿ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಅವರು ಕಾರ್ಯಕ್ರಮಕ್ಕೆ ಶುಭಕೋರಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಹಾಗೂ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್, ತಾಂತ್ರಿಕ ಸಲಹೆಗಾರರಾಗಿ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸಂತೋಷ್ ನಾಯರ್ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಪರೀಕ್ಷೆಯ ಫಲಿತಾಂಶವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದೆಂದು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.