ಕರ್ನಾಟಕ ರಾಜ್ಯ ಕಾನೂನು ಸೇವೆಗಳಪ್ರಾಧಿಕಾರ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು,ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ ಇವುಗಳ ಸಂಯುಕ್ತಾಶ್ರರಯ ದಲ್ಲಿ ಕಾನೂನು ಅರಿವು ಕಾರ್ಯಕ್ರಮ ಅ 28 ರಂದು ಸುಳ್ಯ ನ್ಯಾಯಾಲಯದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ” ಅಂಗವಾಗಿ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ. ಮೋಹನ್ ಬಾಬು ರವರು ಪ್ರತಿಜ್ಞೆಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಸಿವಿಲ್ ನ್ಯಾಯಾಧೀಶೆ ಕು.ಅರ್ಪಿತಾ ಸಹಾಯಕ ಸರ್ಕಾರಿ ಅಭಿಯೋಜಕರಾದ ಆರೋನ್ ಡಿಸೋಜ, ನ್ಯಾಯಾಲಯದ ಪೊಲೀಸ್ ಸಿಬ್ಬಂದಿಗಳು ,ಹಿರಿಯ ಸಿವಿಲ್ ಮತ್ತು ಸಿವಿಲ್ ನ್ಯಾಯಾಲಯದ ಎಲ್ಲಾ ಸಿಬ್ಬಂದಿಗಳು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿರಸ್ತೇದಾರ್ ಗಿರೀಶ್ ಸ್ವಾಗತಿಸಿ ವಂದಿಸಿದರು.