ಡಿ.29 ರಂದು ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಅ.27 ರಂದು ಕೇರ್ಪಳ ಸಂಧ್ಯಾರಶ್ಮಿ ಸಭಾಭವನದಲ್ಲಿ ನಡೆಯಿತು.
ಆಮಂತ್ರಣ ಪತ್ರದ ಬಿಡುಗಡೆಯನ್ನು ರಬ್ಬರ್ ಬೋರ್ಡ್ ನ ನಿವೃತ್ತ ಡೆಪ್ಯೂಟಿ ಕಮಿಷನರ್ ಬಾಲಕೃಷ್ಣ ಮಂಗಳೂರು ನೆರವೇರಿಸಿ ಈ ಸಂಘದ ಉಪಯೋಗಗಳ ಬಗ್ಗೆ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಸಂಘದ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ವಹಿಸಿದ್ದರು. ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ರಾಮ ಮುಗ್ರೋಡಿ , ಗೌರವಾಧ್ಯಕ್ಷರಾದ ಶಂಕರ ಪಾಟಾಳಿ ಪರಿವಾರಕಾನ, ಉಪಾಧ್ಯಕ್ಷೆ ಶ್ರೀಮತಿ ಶಾರದಾಕೃಷ್ಣ ಈಶಾ ಪುತ್ತೂರು, ಪ್ರಧಾನ ಕಾರ್ಯದರ್ಶಿ ಮಹಾಲಿಂಗನ್ ಬಾಜರ್ತೊಟ್ಟಿ, ತಾಲೂಕು ಸಂಘದ ಕಾರ್ಯದರ್ಶಿ ಸಚಿತ್ ಕಲ್ಮಡ್ಕ, ತಾಲೂಕು ಸಂಘದ ಮಾಜಿ ಅಧ್ಯಕ್ಷ ನಾರಾಯಣ ನಾವೂರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ತಾಲೂಕು ಸಂಘ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಹಾಗೂ ಸಮುದಾಯ ಬಾಂಧವರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಚಂದ್ರಶೇಖರ ಪನ್ನೆ ಸ್ವಾಗತಿಸಿ, ಕಾರ್ಯದರ್ಶಿ ಸಚಿತ್ ಕಲ್ಮಡ್ಕ ವಂದಿಸಿದರು.