ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಅ. 30 ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಉಚಿತ ಕಾನೂನು ಸಲಹೆ ಸಪ್ತಾಹ ನಡೆಯಿತು.
ಠಾಣೆಗೆ ಬರುವ ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ಸಲಹೆ ಪಡೆದುಕೊಳ್ಳಲು ಪ್ರತಿ ತಿಂಗಳಲ್ಲಿ ಒಂದು ದಿನ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸುಳ್ಯ ನ್ಯಾಯಾಲಯದ ಪ್ಯಾನಲ್ ವಕೀಲರಾದ ಜಗದೀಶ್ ಡಿ.ಪಿ ಕಾನೂನು ಸಲಹೆ ನೀಡಿದರು. ಹಲವಾರು ಮಂದಿ ಇದರ ಪ್ರಯೋಜನ ಪಡೆದುಕೊಂಡರು.