ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಶ್ರಯದಲ್ಲಿ ಏಕ ವಲಯ ಅಂತರ್ ಕಾಲೇಜು ಗುಡ್ಡಗಾಡು ಓಟ

0

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ ಇದರ ಸಹಭಾಗಿತ್ವದಲ್ಲಿ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಅ. 29 ರಂದು ವಿಶ್ವವಿದ್ಯಾಲಯ ಮಟ್ಟದ ಮಹಿಳೆಯರ ಹಾಗೂ ಪುರುಷರ ಗುಡ್ಡಗಾಡು ಓಟ ನಡೆಯಿತು.

ಮುಂಜಾನೆ 6.30 ಎ.ಒ.ಎಲ್.ಇ ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ ಸ್ಪರ್ಧೆಗೆ ಚಾಲನೆ ನೀಡಿದರು. ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು. ಕಾಲೇಜಿನ ಮೈದಾನದಿಂದ 10 ಕಿ.ಮೀ ಕ್ರಮಿಸಿ ಮತ್ತೆ ಕಾಲೇಜು ಮೈದಾನದಲ್ಲಿ ಸ್ಪರ್ಧೆ ಮುಕ್ತಾಯಗೊಂಡಿತು. ಬಳಿಕ ಎ.ಒ.ಎಲ್.ಇ. ಅಧ್ಯಕ್ಷ ಡಾ. ಕೆ.ವಿ. ಚಿದಾನಂದರ ಅಧ್ಯಕ್ಷತೆಯಲ್ಲಿ ಸಮಾರೋಪ ಮತ್ತು ಬಹುಮಾನ ವಿತರಣಾ ಸನಾರಂಭ ನಡೆಯಿತು.

ವೇದಿಕೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಜೊತೆ ಕಾರ್ಯದರ್ಶಿ ಹೇಮನಾಥ್ ಕೆ.ವಿ, ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಕ್ರೀಡಾ ಸಂಯೋಜಕರಾದ ಡಾ. ವರುಣ್ ಭಾಸ್ಕರ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮಿಥನ್ ಕೆ ಉಪಸ್ಥಿತರಿದ್ದರು. ಪುರು‍ಷರ ವಿಭಾಗದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಬಳ್ಳಾರಿ ಮೆಡಿಕಲ್ ಕಾಲೇಜು ಆಂಡ್ ರಿಸರ್ಚ್ ಸೆಂಟರ್ ಪ್ರಥಮ, ಕೆ.ವಿ.ಜಿ ಇನ್ಟ್ಟಿಟ್ಯೂಸ್ ಆಫ್ ಫಿಸಿಯೋತೆರಪಿ ಸುಳ್ಯ ದ್ವಿತೀಯ, ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಮೂಡಬಿದಿರೆ ತೃತೀಯ ಸ್ಥಾನ ಪಡೆದುಕೊಂಡಿತು. ಮಹಿಳೆಯರ ವಿಭಾಗದಲ್ಲಿ ಸಜ್ಜನಶ್ರೀ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಭಾಗಲಕೋಟೆ ಪ್ರಥಮ, ಕೆ.ವಿ.ಜಿ ಇನ್ಟ್ಟಿಟ್ಯೂಸ್ ಆಫ್ ಫಿಸಿಯೋತೆರಪಿ ಸುಳ್ಯ ದ್ವಿತೀಯ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ತೃತೀಯ ಸ್ಥಾನವನ್ನು ಪಡೆದುಕೊಂಡಿತು. ಡಾ ವರುಣ್ ಭಾಸ್ಕರ್ ಸ್ವಾಗತಿಸಿ, ವಿದ್ಯಾ ವಂದಿಸಿದರು. ವಿದ್ಯಾರ್ಥಿಗಳಾದ ಸಾದ್ವಿ ಮತ್ತು ಹರ್ಷಿಣಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ಪರ್ಧಾರ್ಥಿಗಳು, ದೈಹಿಕ ಶಿಕ್ಷಣ ನಿರ್ದೇಶಕರು, ವಿದ್ಯಾರ್ಥಿಗಳು ಉಪನ್ಯಾಸಕ ವೃಂದ ಹಾಗೂ ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.