ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ – 2024

0

ಕ್ರೀಡೆಯಿಂದ ಮಾನಸಿಕ ಒತ್ತಡ ನಿಯಂತ್ರಣ ಡಾ. ಉಜ್ವಲ್ ಯು.ಜೆ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಅ. 29ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅರಂತೋಡು ಪ್ರಾ.ಕೃ.ಪ.ಸ. ಸಂಘದ ಸಂತೋಷ್ ಕುತ್ತಮೊಟ್ಟೆ ಭಾಗವಹಿಸಿ ಮಕ್ಕಳಲ್ಲಿ ಕ್ರೀಡೆಯ ಮಹತ್ವವನ್ನು ಜಾಗೃತಿಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಶುಪಾಲರಾದ ಡಾ. ಯಶೋದಾ ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿ.ಇ.ಒ ಡಾ. ಉಜ್ವಲ್ ಯು.ಜೆ ಮಾತನಾಡಿ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಿಂದಾಗುವ ಉಪಯೋಗ ಹಾಗೂ ಮಾನಸಿಕ ಒತ್ತಡ ನಿಯಂತ್ರಣ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ, ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್, ಮೌರ್ಯ ಆರ್ ಕುರುಂಜಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳಾದ ಮಾಧವ ಬಿ ಟಿ, ಪ್ರಸನ್ನ ಕಲ್ಲಾಜೆ, ದೈಹಿಕ ಶಿಕ್ಷಕರಾದ ಡಾ. ರಾಜೇಶ್ ಕುಮಾರ್ , ಪ್ರಶಾಂತ್ ಕೆ, ಆಶಾಲತ ಹಾಗೂ ಕಾಲೇಜಿನ ಉಪಾಪ್ರಾಂಶುಪಾಲರಾದ ದೀಪಕ್ ವೈ.ಆರ್, ಭೋದಕ ಭೋದಕೇತರ ಸಿಬ್ಬಂದಿಗಳು ಉಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರತಿಜ್ಞಾ ಸ್ವಾಗತಿಸಿ, ಖಲಿದಾ ನ್ಯೂಹ ವಂದಿಸಿದರು.