ಮಂಗಳೂರಿನಲ್ಲಿ ನಡೆದ ಜಿಲ್ಲಾ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸುಳ್ಯದಲ್ಲಿ ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ರೀಡಾ, ಕಲಾ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಸುಳ್ಯ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಗೋಕುಲ್ ದಾಸ್ ಸುಳ್ಯ ಇವರು 2024-25ನೇ ಲಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಂದ ಸ್ವೀಕರಿಸಿದರು.
ಸಂಸದ ಬ್ರಿಜೇಶ್ ಚೌಟ, ಶಾಸಕರು, ನಿಗಮ, ಮಂಡಳಿ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.