ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಕಾರ್ಯ ನಿರ್ವಹಣಾಧಿಕಾರಿ ಡಾ. ಉಜ್ವಲ್ ಯು .ಜೆ. ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿದ್ದರು.
ಐದನೇ ತರಗತಿಯ ವಿದ್ಯಾರ್ಥಿನಿ ಅಪರ್ಣ ಕನ್ನಡ ಪ್ರತಿಜ್ಞ ವಿಧಿಯನ್ನು ಬೋಧಿಸಿದರೆ, ವೇದ್ವಿ ಯು ಕನ್ನಡ ನಾಡು ನುಡಿಯ ವಿಶೇಷತೆಯ ಕುರಿತು ತಿಳಿಸಿದಳು.
ಕನ್ನಡ ಶಿಕ್ಷಕಿ ಶ್ರೀಮತಿ ಹೇಮಾ ವೈಲಾಯ ‘ ಕನ್ನಡ ರಾಜ್ಯೋತ್ಸವದ ಮಹತ್ವ ಮತ್ತು ಕನ್ನಡವನ್ನು ಹೇಗೆ ಉಳಿಸಿ ಬೆಳೆಸಬೇಕು’ ಎಂಬುವುದರ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಕನ್ನಡ ನಾಡು ನುಡಿಯ ಬಗ್ಗೆ ಹಾಡು ಹಾಡಿದರು. 5ನೇ ತರಗತಿಯ ಪ್ರಣತಿ ಕಾರ್ಯಕ್ರಮ ನಿರೂಪಿಸಿದರು. ಸಮನ್ಯು ಸ್ವಾಗತಿಸಿ, ಅಭಯ್ ಗಣಪತಿ ವಂದಿಸಿದರು. ಕನ್ನಡ ಶಿಕ್ಷಕಿ ಶ್ರೀಮತಿ ಜಯಂತಿ ಸಹಕರಿಸಿದರು ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಮತ್ತು ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಉಪಸ್ಥಿತರಿದ್ದರು.