ಪುಸ್ತಕ ಪ್ರದರ್ಶನ ಮತ್ತು ಮಾರಾಟಕ್ಕೆ ಹೆಸರು ನೋಂದಾಯಿಸಲು ಮನವಿ
ನ. 23 ರಂದು ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ 27 ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು ಆಸಕ್ತರು ಪುಸ್ತಕ ಪ್ರದರ್ಶನ ಮತ್ತು ಮಾರಾಟ ಸಮಿತಿ ಸಂಚಾಲಕರಾದ ಅಶ್ರಫ್ ಗುಂಡಿಯವರನ್ನು (9448106807) ಸಂಪರ್ಕಿಸಿ ಹೆಸರನ್ನು ನೋಂದಾಯಿಸಬೇಕೆಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.