ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ ಹಾಗೂ ನೇತ್ರ ಚಿಕಿತ್ಸಾ ವಿಭಾಗ ಮಡಿಕೇರಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ, ಉದ್ಬವ್ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಬೆಂಗಳೂರು, ಸಂಪಾಜೆ, ಚೆಂಬು, ಪೆರಾಜೆ ಹಾಗೂ ಮದೆನಾಡು ಗ್ರಾಮ ಪಂಚಾಯತಿ , ಚೆಂಬು ಶ್ರೀ ಭಗವಾನ್ ಸಂಘ, ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಕಲ್ಲುಗುಂಡಿ ಬಿ.ಎಂ.ಎಸ್. ಅಟೋ ಚಾಲಕರ ಸಂಘ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಂಪಾಜೆ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ನೇತ್ರ ಪರೀಕ್ಷೆ , ಕಣ್ಣಿನಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರವು ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನ.14ರಂದು ನಡೆಯಲಿದೆ.