ನ.16: ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಹಬ್ಬ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆ, ರಾಷ್ಟ್ರೋತ್ಥಾನ ಶಿಶುಮಂದಿರ ಟ್ರಸ್ಟ್ ಆಶ್ರಯದಲ್ಲಿ ವಾರ್ಷಿಕ ಹಬ್ಬ ಹಾಗೂ ನೂತನ ಕಂಪ್ಯೂಟರ್ ವಿಭಾಗದ ಲೋಕಾರ್ಪಣೆ ಕಾರ್ಯಕ್ರಮವು ನ.16ರಂದು ನಡೆಯಲಿದೆ.

ಬೆಳಿಗ್ಗೆ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.


ಸಭಾ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ನೂತನ ಕಂಪ್ಯೂಟರ್ ವಿಭಾಗವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಲೋಕಾರ್ಪಣೆ ಮಾಡಲಿದ್ದಾರೆ. ನೂತನ ಧ್ವನಿವರ್ಧಕವನ್ನು ಪುತ್ತೂರು ವಿಭಾಗ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ಪ್ರಧಾನ ಅಭ್ಯಾಗತರಾಗಿ ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಕೃಷ್ಣಶೆಟ್ಟಿ ಕಡಬ, ಕೆನರಾ ಬ್ಯಾಂಕಿನ ಡಿ.ಎಂ. ಆರ್.ಒ. ಅಜಿತ್ ಕುಮಾರ್ ಪಿ.ಆರ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾದವ ಗೌಡ ಉಪಸ್ಥಿತರಿರಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಶಿಶುಮಂದಿರದ ಪುಟಾಣಿಗಳಿಂದ ಸಾಂಸ್ಕೃತಿಕ ಕಲರವ, ಮಧ್ಯಾಹ್ನ ಭೋಜನದ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಮೆರಗು ಜರುಗಲಿದೆ.