ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಸ್ಮರಣಾರ್ಥ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

0

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ, ಸುಳ್ಯ ದ.ಕ ಇಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ನ. 12ರಂದು ಆಯೋಜಿಸಲಾಯಿತು.

ಖ್ಯಾತ ವಕೀಲರಾದ ಶ ರಾಮಚಂದ್ರ ಶ್ರೀಪಾದ ಹೆಗ್ಗಡೆ ಸುಳ್ಯ, ಇವರು “ವಕೀಲ ವೃತ್ತಿಯಲ್ಲಿ ಇರುವ ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಬಗ್ಗೆ ಸುದೀರ್ಘವಾದ ಉಪನ್ಯಾಸವನ್ನು ನೀಡಿದರು.

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಉದಯಕೃಷ್ಣ, ಬಿ, ರವರು, ಅಧ್ಯಕ್ಷತೆ ವಹಿಸಿದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಅಧಿಕಾರಿಯಾದ ಪ್ರೋ. ಕೆ.ವಿ. ದಾಮೋದರ ಗೌಡ, ಸಹಾಯಕ ಪ್ರಾಧ್ಯಾಪಕಿ, ವಿದ್ಯಾರ್ಥಿ ಕ್ಷೇಮಾಧಿಕಾರಿ ಶ್ರೀಮತಿ. ಟೀನಾ ಹೆಚ್. ಎಸ್, ಕಾಲೇಜಿನ ಕಾನೂನು ನೆರವು ಘಟಕದ ಸಂಯೋಜಕಿ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ. ಕಲಾವತಿ ಎಮ್ ರವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರೀ ಅನೀಶ ಮತ್ತು ಕು. ನಂದನ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಗಳಾದ ದೀಪ್ತಿ, ಕವನ ಮತ್ತು ಅಂಜಲಿಯವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ವಿದ್ಯಾರ್ಥಿ ಶ್ರೀ ಅನೀಶ ರವ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು. ವಿದ್ಯಾರ್ಥಿನಿ ಕು. ನಂದನ ಸ್ವಾಗತಿಸಿದರು. ವಿದ್ಯಾರ್ಥಿನಿ ಕು.ಸಾಂದ್ರ ಕಾರ್ಯಕ್ರಮ ನಿರೂಪಿಸಿದರು.