














ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಗುಂಡ್ಯ ದಲ್ಲಿ ನ.15 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಸುಬ್ರಹ್ಮಣ್ಯ ವಲಯದ ಎಲ್ಲಾ ಒಕ್ಕೂಟಗಳ ಸ್ವಸಹಾಯ ಸಂಘ, ಪ್ರಗತಿಬಂಧು ಸಂಘ, ಜ್ಞಾನವಿಕಾಸ ಸಂಘಗಳ ಸಂಪೂರ್ಣ ಬೆಂಬಲ ಇದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ ರವರು ಹೇಳಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸರ್ವರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ.










