ಪೆರುವಾಜೆ ಗ್ರಾಮ ಪಂಚಾಯತ್ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಆರೋಗ್ಯ ತರಬೇತಿ

0

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ,ಗ್ರಾಮ ಪಂಚಾಯತ್ ಪೆರುವಾಜೆ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ತರಬೇತಿ ಕಾರ್ಯಕ್ರಮವು ನ.16 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಮೇಲ್ವಿಚಾರಕಿ ರಾಹೆಲಮ್ಮ ಡಿ.ವಿ, ಆರೋಗ್ಯ ಅಧಿಕಾರಿ ಕ್ರಿಸ್ಟಲ್ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶಹಿನಾಜ್, ಸದಸ್ಯರಾದ ಸಚಿನ್ ರಾಜ್ ಶೆಟ್ಟಿ,ಮಾಧವ ಮುಂಡಾಜೆ, ರೇವತಿ ಮಠತ್ತಡ್ಕ,ಶಿಶು ಅಭಿವೃಧಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ ವೇದಿಕೆಯಲ್ಲಿದ್ದರು.


ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ ಸ್ವಾಗತಿಸಿ,ವಂದಿಸಿದರು.
ಆರೋಗ್ಯ ಇಲಾಖೆಯವರು,ಆಶಾ ಕಾರ್ಯಕರ್ತೆಯರು,ಶಾಲಾ ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.