ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಮತ್ತು ಕೆರಿಯರ್ ಡೆಸ್ಟಿನಿ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನ.೧೬ರಂದು ಕಾಲೇಜಿನ ವಿದ್ಯಾರ್ಥಿಗಳಿಗಾಗಿ ನೂತನವಾಗಿ ಆರಂಭಗೊಂಡ ಏವಿಯೇಷನ್ ಸರ್ಟಿಫಿಕೆಟ್ ಕೋರ್ಸುನ ಉದ್ಘಾಟನಾ ಕಾರ್‍ಯಕ್ರಮವು ನಡೆಯಿತು.
ಪ್ರಸ್ತುತ ಸ್ಫರ್ಧಾತ್ಮಕ ಜಗತ್ತಿನಲ್ಲಿ ವಿಶೇಷ ರೀತಿಯ ಕೌಶಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ವೃದ್ಧಿಸುವ ನಿಟ್ಟಿನಲ್ಲಿ ಹಾಗೂ ಉದ್ಯೋಗ ಅವಕಾಶವನ್ನು ಸೃಷ್ಟಿಸುವ ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಆಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಸುಳ್ಯ ಇದರ ಉಪಾಧ್ಯಕ್ಷರಾದ ಶ್ರೀಮತಿ ಶೋಭಾ ಚಿದಾನಂದ ಇವರು ನೆರವೇರಿಸಿ, ಕೌಶಲ್ಯಗಳನ್ನು ವೃದ್ಧಿಸಿಕೊಂಡು ಹೋಸ ರೀತಿಯಲ್ಲಿ ಜೀವನವನ್ನು ಕಟ್ಟುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ಇವರು ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಕೆರಿಯರ್ ಡೆಸ್ಟಿನಿ ಮಂಗಳೂರು ಇದರ ಶ್ರೀಮತಿ. ಜಯಶ್ರೀ.ಕೆ ಇವರು ಕೋರ್ಸುನ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾರ್‍ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಶ್ರೀಯುತ ಚಂದ್ರಶೇಖರ ಪೇರಾಲು , ಐಕ್ಯೂಎಸಿ ಸಂಯೋಜಕಿ ಶ್ರೀಮತಿ ಡಾ. ಮಮತ ಕೆ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀಮತಿ. ರತ್ನಾವತಿ.ಡಿ ಸರ್ವರನ್ನು ವಂದಿಸಿದರು. ಶ್ರೀಯುತ ರೋಶನ್ ಕೆರಿಯರ್ ಡೆಸ್ಟಿನಿ ಮಂಗಳೂರು ಇದರ ಕೋರ್ಸ್ ತರಬೇತುದಾರರು ತರಬೇತಿಯನ್ನು ನೀಡಿದರು. ಅನ್ವಯ ತೃತೀಯ ಬಿ.ಕಾಂ ಕಾರ್‍ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ಮತ್ತು ವಿದ್ಯಾರ್ಥಿ ವೃಂದದವರು ಕಾರ್‍ಯಕ್ರಮದಲ್ಲಿ ಉಪಸ್ಥಿತರಿದ್ದರು.