ಸರ್ಕಾರದ ವತಿಯಿಂದ ಕಟ್ಟಡ ಕಾರ್ಮಿಕರಿಗೆ ದೊರೆಯುವ ಸವಲತ್ತುಗಳ ಕಿಟ್ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ನಡೆದಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾರ್ಮಿಕರಿಗೆ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ , ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ, ಬಿಜೆಪಿ ಮುಖಂಡರಾದ ರಾಕೇಶ್ ರೈ ಕೆಡೆಂಜಿ, ಸುಬೋದ್ ಶೆಟ್ಟಿ ಮೇನಾಲ, ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ, ಸಂತೋಷ್ ಜಾಕೆ, ಮಹೇಶ್ ಕುಮಾರ್ ಮೇನಾಲ, ಸುನಿಲ್ ಕೇರ್ಪಳ, ಅಶೋಕ ಅಡ್ಕಾರು ಉಪಸ್ಥಿತರಿದ್ದರು.