ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ ಹಾಗೂ ನೇತ್ರ ಚಿಕಿತ್ಸಾ ವಿಭಾಗ ಮಡಿಕೇರಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ , ಉದ್ಬವ್ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ , ಚೆಂಬು, ಪೆರಾಜೆ , ಸಂಪಾಜೆ ಹಾಗೂ ಮದೆನಾಡು ಗ್ರಾಮ ಪಂಚಾಯತಿ , ಶ್ರೀ ಭಗವಾನ್ ಸಂಘ ಚೆಂಬು , ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಬಿ.ಎಂ.ಎಸ್. ಅಟೋಚಾಲಕರ ಸಂಘ ಕಲ್ಲುಗುಂಡಿ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಲಯನ್ಸ್ ಕ್ಲಬ್ ಸಂಪಾಜೆ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ನೇತ್ರ ಪರೀಕ್ಷೆ , ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರವು ನ.14ರಂದು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.