ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದು, ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕಡೆಪಾಲದಲ್ಲಿ ನ.17ರಂದು ಬೆಳಿಗ್ಗೆ ಸಂಭವಿಸಿದೆ.
ಕಲ್ಲುಗುಂಡಿಯ ಅಶ್ರಫ್ ಎಂಬವರ ಕಾರಿನಲ್ಲಿ ಅವರ ಕೆಲಸದವರು ಬೆಳಿಗ್ಗೆ ದೊಡ್ಡಡ್ಕದ ಮದರಸಕ್ಕೆ ವಿದ್ಯಾರ್ಥಿಗಳನ್ನು ಬಿಡಲು ಬರುತ್ತಿರುವ ವೇಳೆ ಕಡೆಪಾಲದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದಿದ್ದು, ಚಾಲಕ ಸೇರಿದಂತೆ ಕಾ್ಇನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಹಾಗೂ ಹಿಂಭಾಗ ಜಖಂಗೊಂಡಿದೆ.