ಸುಳ್ಯ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಜನ್ಮದಿನಾಚರಣೆ

0

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ್ ಅಧ್ಯಕ್ಷತೆ ವಹಿಸಿ ಮಾತನಾಡಿ ಶ್ರೀಮತಿ ಇಂದಿರಾ ಗಾಂಧೀಯವರು ಪ್ರಥಮ ಮಹಿಳಾ ಪ್ರಧಾನಿಯಾಗಿ 20 ಅಂಶಗಳ ಕಾರ್ಯಕ್ರಮಗಳನ್ನು ದೇಶದಲ್ಲಿ ಜಾರಿಗೆ ತಂದು ಆಧುನಿಕ ಭಾರತ ದೇಶವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ತರಲು ಕಾರಣೀಭೂತರಾಗಿದ್ದಾರೆ. ದೇಶದ ಬಡವರಿಗೆ ಬ್ಯಾಂಕಿಂಗ್ ಕ್ಷೇತ್ರವನ್ನು ಕೈಗೇಟುಕುವಂತೆ ಮಾಡಿದ್ದಾರೆ. ಬಾಂಗ್ಲಾ ವಿಮೋಚನೆ ಮುಂತಾದ ದಿಟ್ಟ ನಿರ್ಧಾರ ಮತ್ತು ಆಡಳಿತದಿಂದ ವಿರೋಧಿಗಳಿಂದಲೂ ದುರ್ಗೆ ಎಂದು ಕರೆಯಿಸುವಂತೆ ಆಗಿದ್ದಾರೆ. ಅವರ ಮಾರ್ಗದರ್ಶನ ಮತ್ತು ದೂರಾದೃಷ್ಟಿ ಇಂದು ನಮಗೆ ಅಗತ್ಯವಾಗಿದೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಗೋಕುಲ್ ದಾಸ್ ಮಾತನಾಡಿ ಇಂದಿರಾ ಗಾಂಧೀಜಿಯವರು ಆದರ್ಶಪ್ರಾಯರು ಅವರ ಸ್ಮರಣೆ ಪ್ರತಿದಿನ ಈ ದೇಶದ ಜನತೆ ಮಾಡಬೇಕಾಗಿದೆ. ಗ್ರಾಮ ಮಟ್ಟದಲ್ಲಿ ಪ್ರತೀ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಮಾಡಿದರೆ ಮುಂದಿನ ಪೀಳಿಗೆಗೆ ಅವರ ಆದರ್ಶಗಳು ಮತ್ತು ಸಾಧನೆಗಳು ತಿಳಿಯುವಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟರು. ಜಿಲ್ಲಾ ಕಾಂಗ್ರೆಸ್ ಸದಸ್ಯ ನಂದರಾಜ್ ಸಂಕೇಶ್ ಮಾತನಾಡಿ ಇಂದಿರಾ ಗಾಂಧಿಯವರು 20 ಅಂಶಗಳ ಕಾರ್ಯಕ್ರಮದಲ್ಲಿ ದಲಿತರಿಗೆ ದೇಗುಲ ಪ್ರವೇಶ, ಗರೀಬಿ ಹಠವೋ ಮೊದಲಾದ ಕ್ರಾಂತಿಕಾರಿ ಹೆಜ್ಜೆಗಳನ್ನು ಇಡುವ ಮೂಲಕ ದೇಶದಲ್ಲಿ ಇಂದು ಬಡವರಿಗೆ ದಲಿತರಿಗೆ ಮಹಾನ್ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.


ಜಿಲ್ಲಾ ಕೆಡಿಪಿ ಸದಸ್ಯೆ ಸುಜಯ ಕೃಷ್ಣಾ ಇಂದಿರಾ ಗಾಂಧೀಜಿಯವರ ಬಗ್ಗೆ ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ಅಂಬೇಕಲ್ಲು, ಧರ್ಮಪಾಲ ಕೊಯಿಂಗಾಜೆ ನಗರ ಪಂಚಾಯತ್ ಸದಸ್ಯ ಧೀರಾ ಕ್ರಾಸ್ತಾ, ನಾಮನಿರ್ದೇಶಿತ ಸದಸ್ಯ ರಾಜು ಪಂಡಿತ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಸದಸ್ಯ ರಂಜಿತ್ ರೈ ಮೇನಾಲ, ಎನ್ ಎಸ್ ಯೂ ಐ ಅಧ್ಯಕ್ಷ ಧನುಷ್ ಕುಕ್ಕೇಟಿ, ಗ್ರಾಮ ಪಂಚಾಯತ್ ಸದಸ್ಯ ಸತ್ಯಕುಮಾರ್ ಅಡಿಂಜ, ಅನಿಲ್ ರೈ ಪುಡ್ಕಜೆ, ಸೌಕತ್ ಅಲಿ ಮೇನಾಲ, ಮಹೇಶ್ ಬೆಳ್ಳಾರ್ಕರ್ ಕೇಶವ ಮೊರಂಗಲ್ಲು, ಶಿವಕುಮಾರ್ ಕುಕ್ಕಂದೂರ್, ಮಂಜುನಾಥ್ ಮಡ್ತಿಲ ಗಂಗಾಧರ್ ಮೇನಾಲ, ಮೊದಲಾದವರು ಉಪಸ್ಥಿತರಿದ್ದರು. ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ವಂದಿಸಿದರು.