ಕರಾಟೆ ಸ್ಪರ್ಧೆಯಲ್ಲಿ ಸಾಧನೆಗೈದ ಕೆವಿಜಿ ಐಪಿಎಸ್ ನ ವಿದ್ಯಾರ್ಥಿಗಳು

0

ಮುಕ್ತ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಆಯೋಜಿಸಿದ ಪರಿಣಾಮ ಕಲೆ ಮತ್ತು ಕ್ರೀಡಾ ಕರಟೆ ಅಸೋಸಿಯೇಷನ್ ಲ್ಲಿ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಮೂರನೇ ತರಗತಿಯ ತ್ರಿಷಿಕಾ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ, ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಸಾನ್ವಾರಿಯ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು, ನಾಲ್ಕನೇ ತರಗತಿಯ ಅದ್ರಿತ್ ಕಟವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು, ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು, ಐದನೇ ತರಗತಿಯ ಲಿಕೇಶ್ ಕಟ ವಿಭಾಗದಲ್ಲಿ ತೃತೀಯ ಸ್ಥಾನವನ್ನು, ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ, ಸಂಜನ್ ಕಟ ವಿಭಾಗದಲ್ಲಿ ತೃತೀಯ ಸ್ಥಾನ, ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನವನ್ನು, ಚಿರಂತ್ ಕಟ ವಿಭಾಗದಲ್ಲಿ ತೃತೀಯ ಸ್ಥಾನವನ್ನು, ಆರನೇ ತರಗತಿಯ ಸಮೃದ್ಧಿ ಕಟ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು, ಫಾತಿಮಾ ಅಸ್ನ ಕಟ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು, ವಂಶಿಕ್ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು, ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು, ತನ್ವಿತ್ ಕಟ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು, ಮೋನಿಷ್ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು, ಜೀವಿತ್ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು, ಕೃತಿಕ್ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು, ತನುಷ್ ಕಟ ವಿಭಾಗದಲ್ಲಿ ತೃತೀಯ ಸ್ಥಾನವನ್ನು, ಪ್ರತ್ಯೂಷ್ ಕಟ ವಿಭಾಗದಲ್ಲಿ ತೃತೀಯ ಸ್ಥಾನವನ್ನು, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ,ಅರ್ಜುನ್ ಕಟ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಮತ್ತು ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡರು.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪಾ ಬಿದ್ದಪ್ಪ, ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಅಭಿನಂದಿಸಿದರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಕರುಗಳಾದ ಚಂದ್ರಶೇಖರ್ ಕನಕಮಜಲು ಹಾಗೂ ದಿನೇಶ್ ಇವರುಗಳು ಮಾರ್ಗದರ್ಶನ ನೀಡಿರುತ್ತಾರೆ.