ನ.23: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ

0

ಬ್ರಿಜೇಶ್ ಚೌಟ, ಭಾಗೀರಥಿ ಮುರುಳ್ಯ, ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭಾಗಿ

ಎಲೆಚುಕ್ಕಿ ನಿರ್ವಹಣೆ, ಪೋಷಕಾಂಶಗಳ ನಿರ್ವಹಣೆ, ಮಿಶ್ರ ಬೆಳೆ,ಅಡಿಕೆ ಹಳದಿ ರೋಗ ಬಗ್ಗೆ ಕೃಷಿ ವಿಚಾರಗೋಷ್ಠಿ

ತುಳು ಹಾಸ್ಯಮಯ ನಾಟಕ “ಒರಿಯಾಂಡಲಾ ಸರಿಬೋಡು”

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ – 2024 ಕಾರ್ಯಕ್ರಮವು ಸಂಘದ ಪ್ರಧಾನ ಕಛೇರಿಯ ಶತ ಸೌದದ ದೀನ್ ದಯಾಳ್ ರೈತ ಸಭಾಂಗಣದಲ್ಲಿ ನ.23ರಂದು ನಡೆಯಲಿದೆ.

ಕಾರ್ಯಕ್ರಮವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉದ್ಘಾಟಿಸಲಿದ್ದಾರೆ‌.


ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಎಸ್. ಅಂಗಾರ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಎನ್. ಮನ್ಮಥ, ದ.ಕ. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಮಿತ್ರ ಮೂಕಮಲೆ, ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಅಧ್ಯಕ್ಷ ಸಲನಿತ್ಯಾನಂದ ಮುಂಡೋಡಿ, ಗುತ್ತಿಗಾರು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ ಅವರು ಉಪಸ್ಥಿತರಿರಲಿದ್ದಾರೆ.

ಕೃಷಿ ವಿಚಾರಗೋಷ್ಠಿ, ನಾಟಕ ಪ್ರದರ್ಶನ

ಶತಮಾನೋತ್ಸವದ ಪ್ರಯುಕ್ತ ಅಪರಾಹ್ನ ಕೃಷಿ ವಿಚಾರಗೋಷ್ಠಿ ನಡೆಯಲಿದ್ದು, ಅಡಿಕೆ ಎಲೆಚುಕ್ಕಿ ನಿರ್ವಹಣೆ, ಪೋಷಕಾಂಶಗಳ ನಿರ್ವಹಣೆ, ಮಿಶ್ರ ಬೆಳೆ ಏನು, ಹೇಗೆ,
ಅಡಿಕೆ ಹಳದಿ ರೋಗ ಭಾದಿಸಿದರೆ ಕೃಷಿ ಬದುಕು ಹೇಗೆ ಎಂಬ ವಿಚಾರಗಳ ಗೋಷ್ಠಿ ನಡೆಯಲಿದೆ.

ಸಂಜೆ ಗಂಟೆ 7ರಿಂದ ಮಂಗಳೂರಿನ ಲಕುಮಿ ತಂಡದ ಕುಸಾಲ್ದ ಕಲಾವಿದರಿಂದ ‘ಒರಿಯಾಂಡಲಾ ಸರಿಬೋಡು’ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.