ಡಿಸೆಂಬರ್ 1ರಂದು ಮಂಡೆಕೋಲಿನಲ್ಲಿ ಅರೆಭಾಷೆ ಗಡಿನಾಡ ಉತ್ಸವ

0

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಡೆಕೋಲು ಗ್ರಾಮದ ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವವು ಡಿಸೆಂಬರ್ 1ರಂದು ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ’ ನಡೆಯಲಿದೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದು ಅಕಾಡೆಮಿ ವತಿಯಿಂದ ನಡೆಯುತ್ತಿರುವ ಮೂರನೇ ಗಡಿನಾಡ ಉತ್ಸವವಾಗಿದ್ದು, ಅರೆಭಾಷೆ ಅಕಾಡೆಮಿ ಅಸ್ತಿತ್ವಕ್ಕೆ ಬರಲು ಕಾರಣರಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಮತ್ತು ಅಕಾಡೆಮಿಯ ಹಾಲಿ ಅಧ್ಯಕ್ಷರಾದ ಸದಾನಂದ ಮಾವಜಿ ಇವರುಗಳ ಹುಟ್ಟೂರಾಗಿರುವ ಮಂಡೆಕೋಲು ಈ ನಿಟ್ಟಿನಲ್ಲಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಡಿಸೆಂಬರ್ 1 ರಂದು ಬೆಳಗ್ಗೆ 9.00 ಗಂಟೆಗೆ ‘ಫಾರೆಸ್ಟ್ ಬಂಗಲೆ’ ಬಳಿಯಿಂದ ಮೆರವಣಿಗೆ ಹೊರಡುವುದರೊಂದಿಗೆ ಉತ್ಸವ ಆರಂಭಗೊಳ್ಳುತ್ತದೆ. ಪ್ರಗತಿಪರ ಕೃಷಿಕ ಹಾಗೂ ಸಾಮಾಜಿಕ ಧುರೀಣ ಕುಶಾಲಪ್ಪ ಗೌಡ ಕುಕ್ಕೇಟಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ನಂತರ ಬೆಳಗ್ಗೆ 10.00 ಗಂಟೆಯಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗೌಡರ ಯುವ ಸೇವಾ ಸಂಘದ ಪೂರ್ವಾಧ್ಯಕ್ಷರಾದ ಜಾಕೆ ಸದಾನಂದ ಗೌಡ ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಉದ್ದಂತಡ್ಕ, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ರಾಮಕೃಷ್ಣ ರೈ, ಮಂಡೆಕೋಲು ಯಾದವ ಚಾರಿಟೇಬರ್ ಟ್ರಸ್ಟಿನ ಅಧ್ಯಕ್ಷರಾದ ರಾಮಚಂದ್ರ ಮಾಸ್ಟರ್ ಕೇನಾಜೆ, ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ ವಿನುತಾ ಪಾತಿಕಲ್ಲು, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಜಿ. ಮಂಡೆಕೋಲು ಗ್ರಾಮ ಗೌಡ ಸಮಿತಿಯ ಉಸ್ತುವಾರಿ ನಿರ್ದೇಶಕರಾದ ಎಂ.ಎಚ್. ಸುರೇಶ್ ಇವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಅರೆಭಾಷೆ ತ್ರೈಮಾಸಿಕದ ಸಂಯುಕ್ತ ಸಂಚಿಕೆ ಹಿಂಗಾರ ಬಿಡುಗಡೆಗೊಳ್ಳಲಿದೆ.

ನಂತರ 11.00 ಗಂಟೆಯಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ‘ಅರೆಭಾಷೆ ಸಂಸ್ಕೃತಿನ ಉಳ್ಸಿ, ಸಾಹಿತ್ಯನ ಬೆಳ್ಸುವ ಕಾರ್ಯ’ ಕುರಿತು ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಸೈಂಟ್ ಅಲೋಷಿಯಸ್ ಕಾಲೇಜಿನ ಪ್ರಾಧ್ಯಾಪಕರಾಗಿ ರುವ ಡಾ| ವಿಶ್ವನಾಥ ಬದಿಕಾನ ಉಪನ್ಯಾಸ ನೀಡಲಿದ್ದಾರೆ.

12.00 ಗಂಟೆಯಿಂದ ಅಕಾಡೆಮಿ ಪ್ರಕಟಿಸಿದ ಪುಸ್ತಕಗಳ ಕುರಿತು ಅವಲೋಕನ ಕಾರ್ಯಕ್ರಮವಿರುತ್ತದೆ. ಇದರಲ್ಲಿ ಸಂಗೀತಾ ರವಿರಾಜ್ ಹೊಸೂರು, ಲೀಲಾ ದಾಮೋದರ, ಯೋಗಿಶ್ ಹೊಸೊಳಿಕೆ ಹಾಗೂ ಹೇಮಲತಾ ಗಣೇಶ್ ಕವಿಗಳು ಭಾಗವಹಿಸಲಿದ್ದಾರೆ. ಮಧ್ಯಾಹ್ನ ಗಂಟೆ 1.00 ರಿಂದ ಸ್ಥಳೀಯ ಕಲಾವಿದರಿಂದ ಮತ್ತು ಸುಳ್ಯದ ನೆಹರೂ ಕಾಲೇಜಿನ ಅರೆಭಾಷೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದಿಂದ ಮತ್ತು ಸಾಂಸ್ಕೃತಿಕ ಸಂಘದಿಂದ ವೈವಿಧ್ಯಮಯ ಆರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಗಾಯಕರಾದ ಕೆ.ಆರ್. ಗೋಪಾಲಕೃಷ್ಣ ಬಳಗದವರಿಂದ ಗೀತಗಾಯನ ಕಾರ್ಯಕ್ರಮ ಇರುತ್ತದೆ.

ಅಪರಾಹ್ನ ಗಂಟೆ 1.00 ರಿಂದ ಸಮಾರೋಪ ನಡೆಯಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಘನ ಉಪಸ್ಥಿತಿ ಇರಲಿದೆ. ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ದೀಪ ಪ್ರಜ್ವಲನ ಮಾಡಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡುರಾವ್ ಸನ್ಮಾನ ಕಾರ್ಯ ನೆರವೇರಿಸಲಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಳ, ಸಂಸದರಾದ ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯರಾದ ಡಾ। ಡಿ ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಬಿ.ಆರ್, ಎಸ್ ಭೋಜೇ ಗೌಡ, ಐವನ್ ಡಿಸೋಜ, ಕೆ. ಪ್ರತಾಪ್ ಸಿಂಹ ನಾಯಕ್, ಡಾ| ಧನಂಜಯ ಸರ್ಜಿ, ಸುಳ್ಯ ತಹಶೀಲ್ದಾರ್ ಮಂಜುಳಾ ಎಂ, ದ.ಕ. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ದ.ಕ. ಜಿಲ್ಲಾ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡಂಗಾಯ, ಅರೆಭಾಷೆ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಪಿ.ಸಿ. ಜಯರಾಮ್ ಹಾಗೂ ಲಕ್ಷ್ಮೀನಾರಾಯಣ ಕಜೆಗದ್ದೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಲಯನ್ಸ್ ಮಾಜಿ ರಾಜ್ಯಪಾಲರಾದ ಎಂ.ಬಿ. ಸದಾಶಿವ ಅವರು ಸಮಾರೋಪ ಮಾತುಗಳನ್ನಾಡಲಿದ್ದಾರೆ.

ಪ್ರದೇಶದ ಹಿರಿಯ ಅರೆಭಾಷಿಕ ದಂಪತಿ, ಕೃಷಿ ಹಾಗೂ ಹೈನುಗಾರಿಕಾ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಸಾಂಸ್ಕೃತಿಕ ಕ್ಷೇತ್ರ, ಸಹಕಾರ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ

ಗಡಿನಾಡ ಉತ್ಸವದ ಅಂಗವಾಗಿ ಇದೀಗಾಗಲೇ ನವೆಂಬರ್ 18 ರಂದು ವಿವಿಧ ಸ್ಪರ್ಧೆಗಳನ್ನೊಳಗೊಂಡ ಕ್ರೀಡಾಕೂಟ ನಡೆದಿದೆ. ನವೆಂಬರ್ 24 ರಂದು ಸಾಂಸ್ಕೃತಿಕ ಸ್ಪರ್ಧೆಗಳು ಜರುಗಲಿವೆ. ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅವುಗಳು ಇದೀಗಾಗಲೇ ಕಾರ್ಯಪ್ರವೃತ್ತವಾಗಿವೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ‘ದಶವರ್ಷ ಸಂಭ್ರದ’ ಸ್ಮರಣಾರ್ಥ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅರೆಭಾಷಿಕರು ಇರುವ ಗಡಿಪ್ರದೇಶಗಳಲ್ಲಿ ಅರೆಭಾಷೆಯ ಉಳಿವಿಗಾಗಿ ಮತ್ತು ಅವರ ಬಾಂಧವ್ಯವನ್ನು ವೃದ್ಧಿಸಿ ಅರೆಭಾಷೆ ಬೆಳೆಸುವ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅರೆಭಾಷೆ ಗಡಿನಾಡ ಉತ್ಸವಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಂಡೆಕೋಲಿನಲ್ಲಿ ನಡೆಯುತ್ತಿರುವುದು ಇದು ಮೂರನೆಯ ಕಾರ್ಯಕ್ರಮವಾಗಿದೆ. ಮೊದಲ ಕಾರ್ಯಕ್ರಮ ದ.ಕ. ಗಡಿ ಪ್ರದೇಶವಾದ ಬಂದಡ್ಕ ಎಂಬಲ್ಲಿ ಅಕ್ಟೋಬರ್ 27ರಂದು, ಎರಡನೆ ಕಾರ್ಯಕ್ರಮ ಕೊಡಗಿನ ಚೆಯ್ಯಂಡಾಣೆಯಲ್ಲಿ ಬಹಳ ಅದ್ಧೂರಿಯಾಗಿ ಮತ್ತು ಯಶಸ್ವಿಯಾಗಿ ನಡೆದಿತ್ತು. ಇನ್ನುಳಿದ ಮೂರು ಕಾರ್ಯಕ್ರಮಗಳು ಕೊಡಗಿನ ಭಾಗಮಂಡಲ ಹಾಗೂ ಕುಶಾಲನಗರ ಮತ್ತು ದ.ಕ. ಗಡಿಪ್ರದೇಶವಾದ ಕಲ್ಲಪಳ್ಳಿಯಲ್ಲಿ ನಡೆಯಲಿದ್ದು ದಿನಾಂಕ ಇನ್ನಷ್ಟೆ ನಿಗದಿಯಾಗಬೇಕಿದೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಸದಸ್ಯರಾದ ಶ್ರೀಮತಿ ಲತಾಪ್ರಸಾದ್ ಕುದ್ಪಾಜೆ, ವಿನೋದ್ ಮೂಡಗದ್ದೆ, ಸುಳ್ಯ ಗೌಡ ಮಹಿಳಾ ಘಟಕ ಅಧ್ಯಕ್ಷೆ ಶ್ರೀಮತಿ ವಿನುತಾ ಪಾತಿಕಲ್ಲು, ಪ್ರಚಾರ ಸಮಿತಿ ಸಂಚಾಲಕ ಜಯರಾಜ್ ಕುಕ್ಕೆಟ್ಟಿ, ಗ್ರಾಮ ಗೌಡ ಸಮಿತಿ ಕಾರ್ಯದರ್ಶಿ ದಾಮೋದರ ಮಿತ್ತಪೇರಾಲು ಉಪಸ್ಥಿತರಿದ್ದರು.