ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ) ಹೆಬ್ರಿ ಪ್ರಾಯೋಜಿತ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ನೀಡುವ ‘ಶಾರದಾ ಕೃಷ್ಣ’ ಪ್ರಶಸ್ತಿ -2025 ಕ್ಕೆ ಈ ಬಾರಿ ಕನ್ನಡ ರಂಗಭೂಮಿಯ ಪ್ರಸಿದ್ಧ ರಂಗನಿರ್ದೇಶಕ, ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಅಧ್ಯಕ್ಷ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ಡಾ| ಜೀವನ್ ರಾಂ ಸುಳ್ಯ ಅವರು ಆಯ್ಕೆಯಾಗಿದ್ದಾರೆ.
2025 ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಪತ್ರ, ಫಲಕ ಹಾಗೂ ರೂಪಾಯಿ 25,000 ನಗದಿನೊಂದಿಗೆ ಗೌರವಿಸಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾದ ರವಿರಾಜ್ ಎಚ್. ಪಿ. ಅವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.