ಸುಳ್ಯ ಎನ್ಎಂ.ಸಿ.ಯಲ್ಲಿ ‘ಜಾಗೃತಿ ಅರಿವು’ ಕಾರ್ಯಕ್ರಮ

0

ಮಾದಕ ವಸ್ತುಗಳ ಬಳಕೆ ಅಪಾಯಕಾರಿ, ಇದರಿಂದ ದೂರವಿರಿ :ಎಸ್ ಐ ಸಂತೋಷ್ ಬಿ. ಪಿ.

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಕಾನೂನು ಜಾಗೃತಿ ಅರಿವು ಕಾರ್ಯಕ್ರಮ ನ. 23 ದಂದು ಕಾಲೇಜಿನ ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಸಂತೋಷ್ ಬಿ ಪಿ ಭಾಗವಹಿಸಿ ಮಾತನಾಡಿ ಮಾದಕ ವಸ್ತುಗಳ ಬಳಕೆ ತುಂಬಾ ಅಪಾಯಕಾರಿ. ವಿದ್ಯಾರ್ಥಿಗಳು ಮಾದಕ ವ್ಯಸನ ಹಾಗೂ ಇತ್ಯಾದಿ ಯಾವುದೇ ದುಷ್ಚಟಗಳಿಗೆ ಬಲಿಯಾಗದಂತೆ ಹಾಗೂ ಸೈಬರ್ ಅಪರಾಧ ವಿಚಾರಗಳು ಬಂದಾಗ ಜಾಗೃತಿ ವಹಿಸುವ ಕುರಿತು ಮಾಹಿತಿ ನೀಡಿದರು.


ವಿದ್ಯಾರ್ಥಿಗಳು ರಸ್ತೆ ಸಂಚಾರಿ ನಿಯಮಗಳನ್ನು ಸರಿಯಾಗಿ ಅರಿತುಕೊಂಡು ಅದನ್ನು ಪಾಲಿಸುವಂತೆ ಅರಿವು ಮೂಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ವಹಿಸಿದ್ದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಉಪಸ್ಥಿತರಿದ್ದರು.

ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತಾ ಕೆ ಪ್ರಾಸ್ತಾವಿಕ ಮಾತುಗಳಿಂದ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಚಿತ್ರಲೇಖ ಕೆ.ಎಸ್ ವಂದಿಸಿದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಎಂ ಕಾರ್ಯಕ್ರಮ ಸಂಘಟಿಸಿದರು.

ಶ್ರೀಲಯ ದ್ವಿತೀಯ ಬಿ.ಎ ಪ್ರಾರ್ಥಿಸಿ, ಗಾನ ಬಿ.ಡಿ ತೃತೀಯ ಬಿ.ಎ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಭೋದಕ ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.