ಪ್ರಜಾ ಧ್ವನಿ ಕರ್ನಾಟಕ ವತಿಯಿಂದ 1949 ನವೆಂಬರ್ 26 ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ನವಂಬರ್ 27 ಬುಧವಾರದಂದು ರಾಷ್ಟ್ರಧ್ವಜ ಗೌರವ ಯಾತ್ರೆ ಸುಳ್ಯ ತಾಲೂಕಿನಾದ್ಯಂತ ನಡೆಯಲಿದೆ.
ನ 27ರಂದು ಬೆಳಿಗ್ಗೆ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮ ಸಂಪಾಜೆ ಗೇಟಿನ ಬಳಿ ಬೆಳಿಗ್ಗೆ 8.30ಕ್ಕೆ ನಡೆಯಲಿದೆ. ಬಳಿಕ ರಾಷ್ಟ್ರ ಧ್ವಜವನ್ನು ಇರಿಸಿದ ಭವ್ಯ ವಾಹನ ಹಾಗೂ ಸಾರ್ವಜನಿಕರ ವಾಹನಗಳ ಮುಖಾಂತರ ಕಲ್ಲುಗುಂಡಿ, ಅರಂತೋಡು, ಮರ್ಕಂಜ, ಎಲಿಮಲೆ, ಗುತ್ತಿಗಾರು, ಸುಬ್ರಹ್ಮಣ್ಯ, ಪಂಜ, ನಿಂತಿಕಲ್ಲು ಬೆಳ್ಳಾರೆ, ಐವರ್ನಾಡು, ಸೋಣಂಗೇರಿ, ಪೈಚಾರು ಕಡೆಗಳಲ್ಲಿ ಸಂವಿಧಾನದ ಮಹತ್ವವನ್ನು ಸಾರುತ್ತಾ ಸಾಗಿ ಬಂದು ಸುಳ್ಯದ ಜ್ಯೋತಿ ಸರ್ಕಲ್ ನಿಂದ ಪಾದಯಾತ್ರೆಯ ಮೂಲಕ ಸಾಗಿ ಬಂದು ಗಾಂಧಿನಗರದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆಗೆ ಹಾರಾರ್ಪಣೆ ನಡೆಯಲಿದೆ. ಬಳಿಕ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಭಾಷಣವನ್ನು ಖ್ಯಾತ ವಾಗಿ ನಿಕೇತ್ ರಾಜ್ ಮೌರ್ಯ ಮಾಡಲಿದ್ದಾರೆ.