ಪಂಜ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಭಾರತ ಸಂವಿಧಾನವನ್ನು ಅಂಗೀಕರಿಸಿದ 75 ನೇ ವರ್ಷದ ಸಂವಿಧಾನ ಸಂಭ್ರಮ ಕಾರ್ಯಕ್ರಮವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ದೀಪ ಬೆಳಗಿಸಿ ಉದ್ಘಾಟಿಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಯು ಬಿ ರವರು ಸಂವಿಧಾನದ ಪ್ರಸ್ತಾವನೆ ಮತ್ತು ಪ್ರತಿಜ್ಞಾ ವಿಧಿ ಭೋದಿಸಿದರು.
ಗ್ರಂಥಾಲಯದ ಪಿತಾಮಹ ಎಸ್ ಆರ್ ರಂಗನಾಥ್ ಮತ್ತು ಡಾ| ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಯಿತು. ಪಂಚಾಯತ್ ನ ಉಪಾಧ್ಯಕ್ಷ ನಾರಾಯಣ ರವರು ಸಂವಿಧಾನ ದಿನದ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿದರು. ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗಟ್ಟಿ ಓದು ಮತ್ತು ಕಥೆ ಹೇಳುವ ಸ್ಫರ್ಧೆಗಳನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಶ್ರೀಮತಿ ವೀಣಾ ಮತ್ತು ಚಂದ್ರಶೇಖರ ದೇರಾಜೆ, ಸಹಶಿಕ್ಷಕಿ ಮಂಜುಳಾ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ಗೀತಾ, ತಾರನಾಥ, ಬಾಬು, ಶ್ರೀಮತಿ ಗುಲಾಬಿ, ಶ್ರೀಮತಿ ಕೋಮಲಾಂಗಿ ಸಹಕರಿಸಿದರು.
ಕಾರ್ಯಕ್ರಮದಲ್ಲಿ ಗ್ರಂಥಾಲಯದ ಮೇಲ್ವಿಚಾರಕಿ ಶ್ರೀಮತಿ ಚಿತ್ರಕಲಾ ನಿರೂಪಿಸಿದರು . ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.