2025-26ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕ್ರಿಯಾಯೋಜನೆ ತಯಾರಿಸುವ ಬಗ್ಗೆ”ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಗ್ರಾಮ ಸಭೆ ನ.28 ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಯೋಜನೆಯ ಮಾಹಿತಿಯನ್ನು ಪಡಕೊಂಡು ಕಾಮಗಾರಿ ಬೇಡಿಕೆ ಅರ್ಜಿಯನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ.
2025-26ನೇ ಸಾಲಿಗೆ ಗ್ರಾಮಸಭೆ ಹಾಗೂ ಅದಕ್ಕಿಂತ ಮೊದಲು ಬಂದಂತಹ ಕಾಮಗಾರಿಗಳನ್ನು ನಿರ್ವಹಿಸಲು ಅವಕಾಶವಿದ್ದು, ಆ ಬಳಿಕ ಬಂದ ಯಾವುದೇ ಕಾಮಗಾರಿಗಳನ್ನು ನಿರ್ವಹಿಸಲು ಸಾಧ್ಯವಿಲ್ಲ.2024-25ನೇ ಸಾಲಿಗೆ ಪಂಚಾಯತ್ ಗೆ ಸಲ್ಲಿಸತಕ್ಕಂತಹ ಭೂಮಿ,ಕಟ್ಟಡ ಮತ್ತು ನೀರಿನ ಕರಗಳನ್ನು ಪಾವತಿಸಿ ಗ್ರಾಮಾಭಿವೃದ್ಧಿಗೆ ಸಹಕರಿಸುವಂತೆ ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.