ಕರಾವಳಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗಾಗಿ ಸಚಿವ ವೈಷ್ಣವ್ ರಿಗೆ ಮನವಿ ಸಲ್ಲಿಸಿದ ಸಂಸದ ಕ್ಯಾ. ಚೌಟ

0

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನ ಸೇರಿದಂತೆ ಕರಾವಳಿ ಭಾಗದ ಹಲವು ಪ್ರಮುಖ ರೈಲು ಮೂಲಸೌಕರ್ಯ ಅಭಿವೃದ್ಧಿಯ ಕುರಿತ ಬೇಡಿಕೆಗೆಗಳ ಕುರಿತಂತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನದಂದು ಕ್ಯಾ. ಚೌಟ ಅವರು, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ ಸಿ.ಎನ್ ಮಂಜುನಾಥ್ ಜೊತೆಯಾಗಿ ನವದೆಹಲಿಯ ರೈಲು ಭವನದಲ್ಲಿ ಕೇಂದ್ರ ಸಚಿವ ವೈಷ್ಣವ್ ಅವರನ್ನು ಭೇಟಿಯಾದರು.

ಈ ವೇಳೆ ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೇ ವಿಲೀನ, ಕರಾವಳಿ ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನ ನಡುವಿನ ಉತ್ತಮ ರೈಲು ಸಂಪರ್ಕಕ್ಕೆ ತೀರಾ ಅತ್ಯಗತ್ಯವಾಗಿರುವ ಎರಡು ನಗರಗಳ ನಡುವೆ ಟ್ರ್ಯಾಕ್‌ಗಳನ್ನು ದ್ವಿಗುಣಗೊಳಿಸುವುದು, ಈ ಭಾಗದ ರೈಲು ಮಾರ್ಗಗಳಲ್ಲಿ ಪ್ರಯಾಣಿಕರ ಸೌಲಭ್ಯಗಳ ಅಭಿವೃದ್ದಿ

ಸುಬ್ರಹ್ಮಣ್ಯ ಮಂಗಳೂರು ಪ್ಯಾಸೆಂಜರ್ ರೈಲು ಸೇರಿದಂತೆ ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಪ್ರದೇಶಗಳ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಪ್ರಮುಖ ವಿಷಯಗಳನ್ನು ಚರ್ಚಿಸಿ ಮನವಿ ಸಲ್ಲಿಸಿದರು.

ಕೇಂದ್ರ ಸಚಿವರನ್ನು ಭೇಟಿ ಮಾಡಿದ ಬಳಿಕ, ಕ್ಯಾ. ಚೌಟಾ ಅವರು ರಾಜ್ಯದ ರೈಲ್ವೆ ಅಭಿವೃದ್ಧಿಯ ಕುರಿತು ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರೆ. ” ಕೊಂಕಣ ರೈಲ್ವೇ ಮತ್ತು ಹಾಸನ-ಮಂಗಳೂರು ರೈಲು ಅಭಿವೃದ್ಧಿ ಕಂಪನಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕಾಗಿ ಅಗತ್ಯ ರಾಜ್ಯ ಬೆಂಬಲವನ್ನು ಒದಗಿಸುವಂತೆ” ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.