ಪಂಜ:’ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ವಿಶೇಷ ಗ್ರಾಮ ಸಭೆ

0

ಪಂಜ ಗ್ರಾಮ ಪಂಚಾಯತಿಯ ನರೇಗಾ ಯೋಜನೆಯ ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ವಿಶೇಷ ಗ್ರಾಮ ಸಭೆಯು ನ.28 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಉಪಾಧ್ಯಕ್ಷ ನಾರಯಣ ಎನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಯು.ಬಿ. ಸದಸ್ಯರಾದ ಶರತ್ ಕುದ್ವ, ಜಗದೀಶ್ ಪುರಿಯ, ಲಕ್ಷ್ಮಣ ಗೌಡ ಬೊಳ್ಳಾಜೆ, ಚಂದ್ರಶೇಖರ ದೇರಾಜೆ, ಶ್ರೀಮತಿ ನೇತ್ರಾವತಿ ಕಲ್ಲಾಜೆ, ಶ್ರೀಮತಿ ಪೂರ್ಣಿಮಾ ದೇರಾಜೆ, ಶ್ರೀಮತಿ ವೀಣಾ, ಶ್ರೀಮತಿ ದಿವ್ಯ, ಶ್ರೀಮತಿ ಮಲ್ಲಿಕಾ, ಶ್ರೀಮತಿ ಪ್ರಮೀಳಾ ಸಂಪ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ನರೇಗಾ ಯೋಜನೆಯ ತಾಲೂಕು I.E.C. ಶ್ರೀಮತಿ ನಮಿತಾ ಹಾಗೂ B.F.T. ಶ್ರೀಮತಿ ಕಿರಣಾ ಇವರುಗಳು ನರೇಗಾ ಯೋಜನೆಯ ಕುರಿತು ಸಾರ್ವಜನಿಕ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ 2025-26ನೇ ಸಾಲಿನಲ್ಲಿ ಕಾಮಗಾರಿ ನಿರ್ವಹಿಸಲು ಒಟ್ಟು 112 ಬೇಡಿಕೆ ಅರ್ಜಿಗಳು ಸಲ್ಲಿಕೆಯಾದವು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸೀತಾರಾಮ ಎಸ್. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.