⬆️ ಅಂಚೆ ಜನ ಸಂಪರ್ಕ ಅಭಿಯಾನ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮೆ
ಶಿವಾಜಿ ಯುವಕ ಮಂಡಲ (ರಿ.) ಕೂತ್ಕುಂಜ, ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದಲ್ಲಿ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಂಚೆ ಜನ ಸಂಪರ್ಕ ಅಭಿಯಾನ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸಹಯೋಗದಲ್ಲಿ
ಪಾನ್ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ್ ಕಾರ್ಡ್ ದ.1 ರಂದು ಪೂರ್ವಾಹ್ನ 8:30 ರಿಂದ ಪಂಜ ಲಯನ್ಸ್ ಭವನದಲ್ಲಿ ನಡೆಯಲಿದೆ.
ಎಲ್ಲಾ ದಾಖಲೆಗಳ ಮೂಲ ಪ್ರತಿಯನ್ನು ತರುವುದು ಕಡ್ಡಾಯ ಹಾಗೂ ಅವಶ್ಯಕ ದಾಖಲೆಗಳ ಜೆರಾಕ್ಸ್ ಪ್ರತಿಯನ್ನು ತರತಕ್ಕದ್ದು, ಆಧಾರ್ ತಿದ್ದುಪಡಿಯಲ್ಲಿ ಆಯ್ದಾ ಕೆಲವು ತಿದ್ದುಪಡಿಗೆ ನಿಗದಿತ ಶುಲ್ಕ ಇರುತ್ತದೆ.ಯಾವ ವ್ಯಕ್ತಿಯ ದಾಖಲೆಗಳ ತಿದ್ದುಪಡಿ ಇರುತ್ತದೆಯೋ ಅವರೇ ಹಾಜರಾಗತಕ್ಕದ್ದು ಹೆಚ್ಚಿನ ಮಾಹಿತಿಗಾಗಿ 8861894609, 9449321541 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.