ಬೆಳ್ಳಾರೆ : ಪತಂಜಲಿ ಯೋಗ ಸಮಿತಿ ಮತ್ತಿತರ ಸಂಸ್ಥೆಗಳಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪಾದಯಾತ್ರೆ

0

ಪತಂಜಲಿ ಯೋಗ ಸಮಿತಿ ಬೆಳ್ಳಾರೆ, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ, ಪಂಜ‌ ಲಯನ್ಸ್ ಕ್ಲಬ್ ಮತ್ತು ಇತರ ಸಂಘ ಸಂಸ್ಥೆಗಳ ಸಂಯೋಗದೊಂದಿಗೆ, ಸುಬ್ರಹ್ಮಣ್ಯ ಚಂಪಾ ಷಷ್ಠಿಯ ಪ್ರಯುಕ್ತ ಏಳನೇ ವರ್ಷದ ಪಾದಯಾತ್ರೆಯು ನ.30 ರಂದು .
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಪ್ರಾರಂಭಗೊಂಡಿತು.
ದೇವಸ್ಥಾನದ ಅರ್ಚಕರು ಪೂಜೆ ಸಲ್ಲಿಸಿ, ಆಶೀರ್ವದಿಸಿದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಪಾದಯಾತ್ರೆಗೆ ಚಾಲನೆ ನೀಡಿದರು.
ಯೋಗ ಸಮಿತಿಯ ಅಧ್ಯಕ್ಷರು, ಸದಸ್ಯರು, ಸಂಘಟಕರು, ಭಕ್ತಾದಿಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.