ಎಂ.ಎಲ್.ಸಿ. ಮಂಜುನಾಥ ಭಂಡಾರಿ ಆಗಮನ
ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರ ಉಪಸ್ಥಿತಿಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ತಾಲೂಕು ಮಟ್ಟದ ಕಾರ್ಯಾಗಾರ ಡಿ.4 ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಭವನದಲ್ಲಿ , ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳ ಜೊತೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಾಗಾರದಲ್ಲಿ ಕರ್ನಾಟಕ ಸರ್ಕಾರದ ಸ್ಥಳೀಯ ಸಂಸ್ಥೆಗಳ ವಿವಿಧ ಪಂಚಾಯತ್ ರಾಜ್ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ನಡೆಯಲಿದ್ದು ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ.ಸದಸ್ಯರೆಲ್ಲ ಭಾಗವಹಿಸಬೇಕೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ತಾಲೂಕು ಅಧ್ಯಕ್ಷ ಜಯಪ್ರಕಾಶ್ ನೆಕ್ರೆಪ್ಪಾಡಿ ತಿಳಿಸಿದ್ದಾರೆ.